ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ವಿಶ್ವದಾದ್ಯಂತ ಅಭಿಮಾನಿಗಳ ಬಳಗ ಬಹುದೊಡ್ಡ ರೀತಿಯಲ್ಲಿದೆ ಹಾಗೆ ಬೆಂಗಳೂರಿನಲ್ಲೂ ಕೂಡ ಕೂಡ ಬಹುಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ ಬೆಂಗಳೂರಿಗೆ ಬಂದ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ನೋಡಲು ಅಭಿಮಾನಿಗಳ ನೂಕುನುಗ್ಗಲು ಉಂಟಾದ ಘಟನೆ ನಡೆದಿದೆ. ಬನ್ನೇರುಘಟ್ಟದ ಖಾಸಗಿ ಆಸ್ಪತ್ರೆಗೆ ಆಪ್ತರೊಬ್ಬರ ಆರೋಗ್ಯ ವಿಚಾರಿಸಲು ಸೂಪರ್ ಸ್ಟಾರ್ ರಜನಿಕಾಂತ್ ಆಗಮಿಸಿದ್ದು, ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ರಜನಿಕಾಂತ್ ಅವರು ಆಪ್ತರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಲು ರಜನಿಕಾಂತ್ ಆಸ್ಪತ್ರೆಗೆ ಬಂದಿದ್ದು ಈ ಮಾಹಿತಿ ತಿಳಿದ ಅಭಿಮಾನಿಗಳು ಆಸ್ಪತ್ರೆ ಬಳಿ ಮುಗಿಬಿದ್ದಿದ್ದಾರೆ. ಆಸ್ಪತ್ರೆ ಸಿಬ್ಬಂದಿ, ವೈದ್ಯರು ರಜನಿಕಾಂತ್ ಅವರನ್ನು ನೋಡಲು ಮುಗಿ ಬಿದ್ದಿದ್ದು, ಅವರೊಂದಿಗೆ ಸೆಲ್ಫಿ, ಫೋಟೋ ತೆಗೆದುಕೊಂಡಿದ್ದಾರೆ.