ಬೆಂಗಳೂರಿಗೆ ಮಹಾಮಾರಿ ಕೋವಿಡ್ ಭೀತಿ: 9 ತಿಂಗಳ ಮಗುವಿಗೆ ಕೋವಿಡ್ ಸೋಂಕು ದೃಢ!
ಬೆಂಗಳೂರು:- ಕರ್ನಾಟಕ ಸೇರಿದಂತೆ ದೇಶದಲ್ಲಿ ಮಹಾಮಾರಿ ಕೋವಿಡ್ ಸೋಂಕಿನ ಭೀತಿ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 9 ತಿಂಗಳ ಮಗುವಿಗೆ ಕೋವಿಡ್ ಸೋಂಕು ದೃಢವಾಗಿದೆ.
ಜಿಲ್ಲೆಯ ಹೊಸಕೋಟೆ ಮೂಲದ ಮಗುವನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಬಳಿಕ ಮಗುವನ್ನು ವಾಣಿ ವಿಲಾಸ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಮಗುವಿಗೆ ಕೋವಿಡ್ ಸೋಂಕು ತಗುಲಿರುವುದು ದೃಢವಾಗಿದೆ.
ಮಗುವಿನಲ್ಲಿ ಸೋಂಕು ಪತ್ತೆಯಾದ ಬೆನ್ನಲ್ಲೇ ಕೋವಿಡ್ ಮಾನಿಟರ್ ಮಾಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಈ ಬಗ್ಗೆ ಕೇಂದ್ರದಿಂದ ಯಾವುದೇ ಗೈಡ್ ಲೈನ್ಸ್ ಬಂದಿಲ್ಲ. ಜನ ಆತಂಕಪಡುವ ಅಗತ್ಯ ಇಲ್ಲ ಎಂದು ಸಚಿವರು ಹೇಳಿದ್ದಾರೆ.