ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾ ಪ್ರಜೆ ಅರೆಸ್ಟ್!

Date:

ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾ ಪ್ರಜೆ ಅರೆಸ್ಟ್!

ಬೆಂಗಳೂರು: ಇತ್ತೀಚಿಗೆ ಬೆಂಗಳೂರು ಪೊಲೀಸರು ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಯನ್ನು ಬಂಧಿಸಿದ್ದರು. ಪಾಕಿಸ್ತಾನ ಪ್ರಜೆ ಸೇರಿಂದತೆ ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ರಹಮಾನ್ ಶೈಕ್ (38) ಬಂಧಿತ ಆರೋಪಿ. ನಕಲಿ ದಾಖಲೆಗಳನ್ನು ಬಳಸಿ ಭಾರತದಲ್ಲಿ ವಾಸವಾಗಿದ್ದ. ತನ್ನ ಎರಡನೇ ಪತ್ನಿಯೊಂದಿಗೆ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ.
ರಹಮಾನ್ ಶೈಕ್ ಕಳೆದ 8 ವರ್ಷಗಳಿಂದ ಬೆಂಗಳೂರಿನ ಚನ್ನಸಂದ್ರದಲ್ಲಿ ನೆಲೆಸಿದ್ದ. ಕಸ ವಿಂಗಡಣೆ ಘಟಕದಲ್ಲಿ ಕೆಲಸ ಮಾಡುತ್ತಿದ್ದ. ತನ್ನ ಜನ್ಮ ಪ್ರಮಾಣ ಪತ್ರವನ್ನು ನಕಲಿ ಮಾಡಿ, ನಕಲಿ ಪ್ರಮಾಣ ಪತ್ರದಲ್ಲಿ ತಾನು ಪಶ್ಚಿಮ ಬಂಗಾಳದಲ್ಲಿ ಜನಿಸಿದ್ದಾಗಿ ಬರೆದುಕೊಂಡಿದ್ದ.ನಕಲಿ ಆಧಾರ್ ಕಾರ್ಡ್, ನಕಲಿ ಗುರುತಿನ ಚೀಟಿ, ಚಾಲನಾ ಪರವಾನಗಿಯನ್ನೂ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಗ್ಲಾದೇಶದಲ್ಲಿರುವ ರಹಮಾನ್ ಶೈಕ್ ಮೊದಲ ಪತ್ನಿ ತನ್ನ ಪತಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದರು. ತನ್ನ ಪತಿ ವೈದ್ಯಕೀಯ ವೀಸಾ ಮೇಲೆ ಭಾರತಕ್ಕೆ ತೆರಳಿದ್ದು, ಬಳಿಕ ಹಿಂದಿರುಗಿಲ್ಲ ಎಂದು ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಬಾಂಗ್ಲಾ ಪೊಲೀಸರು ಭಾರತದ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬೆಂಗಳೂರು ಪೊಲೀಸರು ರಹಮಾನ್ ಶೈಕ್ ನನ್ನು ಕಳೆದ ವರ್ಷ ಬಂಧಿಸಿದ್ದರು. ಆದರೆ ವೈದ್ಯಕೀಯ ಕಾರಣ ಹೇಳಿ ಜಾಮೀನು ಪಡೆದು ಬಿಡುಗಡೆಯಾಗಿದ್ದ. ಇದೀಗ ಕಾಡುಗೋಡಿ ಪೊಲೀಸರು ಹಾಗೂ ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿ ಅಧಿಕಾರಿಗಳು ರಹಮಾನ್ ಶೈಕ್ ನನ್ನು ಬಂಧಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು:...

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ?

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ? ಹಿಂದೂ ಧರ್ಮದಲ್ಲಿ...

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ದರ ಎಷ್ಟಿದೆ ನೋಡಿ

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ದರ...

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...