ಬೆಂಗಳೂರಿನಲ್ಲಿ ಅಗ್ನಿ ಅವಘಡ: ಬೆಂಕಿ ಕೆನ್ನಾಲಿಗೆಗೆ ಸುಟ್ಟು ಭಸ್ಮವಾದ ಶೆಡ್ʼಗಳು
ಬೆಂಗಳೂರು: ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ವೀರಣ್ಣಪಾಳ್ಯ ಮುಖ್ಯ ರಸ್ತೆಯ ಬಳಿ ಕೂಲಿ ಕಾರ್ಮಿಕರು ವಾಸವಿದ್ದ 20ಕ್ಕೂ ಹೆಚ್ಚು ಶೆಡ್ಗಳು ಬೆಂಕಿಗಾಹುತಿ ಆಗಿದೆ. ಬೆಂಕಿ ಅವಘಡದಿಂದ ಆಟಿಕೆ ಫ್ಯಾಕ್ಟರಿಯ ಕಾರ್ಮಿಕರಿಗಾಗಿ ನಿರ್ಮಿಸಲಾಗಿದ್ದ 50 ಪೈಕಿ 20 ಶೆಡ್ಗಳು ಬೆಂಕಿಗಾಹುತಿ ಆಗಿವೆ.
ಶೆಡ್ನಲ್ಲಿದ್ದ ಸಾಮಗ್ರಿಗಳು ಸಂಪೂರ್ಣ ಸುಟ್ಟುಹೋಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.