No menu items!
15.2 C
Munich
Monday, July 13, 2026

ಬೆಂಗಳೂರಿನಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟ: ಏಳು ಮಂದಿಗೆ ಗಾಯ

Must read

ಬೆಂಗಳೂರು: ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿಗೆ ಗಾಯಗೊಂಡಿರವ ಘಟನೆ ನಗರದ ವೀವರ್ಸ್ ಕಾಲೋನಿ ಸಮೀಪದ ಮಾರುತಿ ಬಡಾವಣೆಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್(32) ನಾಜಿಯಾ(22) ಇರ್ಫಾನ್ (21)ಗುಲಾಬ್(18) ಶಹಜಾದ್(9) ಗಾಯಗೊಂಡವರು. ಮಾರ್ಟಿನ್ ಎಂಬುವವರಿಗೆ ಸೇರಿದ ಮನೆಯಲ್ಲಿ ಕುಟುಂಬ ವಾಸವಾಗಿತ್ತು.
ಆಡುಗೆ ಅನಿಲ ಸೋರಿಕೆಯಾಗಿರುವುದು ತಿಳಿಯದೆ ಇಂದು ಮುಂಜಾನೆ 5:30 ರ ಸುಮಾರಿಗೆ ಲೈಟ್ನ ಸ್ವಿಚ್ ಆನ್ ಮಾಡಿದಾಗ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಮನೆಯ ಕಿಡಕಿ ಬಾಗಿಲುಗಳು ಛಿದ್ರಗೊಂಡಿವೆ. ಮನೆಯ ಮುಂಭಾಗ ನಿಲ್ಲಿಸಿದ್ದ ಕಾರಿನ ಗಾಜುಗಳು ಪುಡಿ ಪುಡಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

- Advertisement -spot_img

More articles

- Advertisement -spot_img

Latest article