No menu items!
16.9 C
Munich
Monday, June 15, 2026

ಬೆಂಗಳೂರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವಿದೇಶಿ ಮಹಿಳೆ ಶವ ಪತ್ತೆ!

Must read

ಬೆಂಗಳೂರು: ಶೇಷಾದ್ರಿಪುರಂ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಜರುಗಿದೆ. ಜರೀನಾ ಮೃತ ಮಹಿಳೆ ಎಂದು ಹೇಳಲಾಗಿದೆ. ನಾಲ್ಕು ದಿನದ ಹಿಂದೆ ನಗರಕ್ಕೆ ಬಂದಿದ್ದ ವಿದೇಶಿ ಮಹಿಳೆ ಬಿಡಿಎ ಸೇತುವೆ ಬಳಿಯ ಖಾಸಗಿ ಸ್ಟಾರ್ ಹೋಟೆಲ್ನ ಸೆಕೆಂಡ್ ಪ್ಲೋರ್ನ ಕೊಠಡಿಯೊಂದರಲ್ಲಿ ಮೃತಪಟ್ಟಿದ್ದಾರೆ. ಮೃತ ಜರೀನಾ ಟೂರಿಸ್ಟ್ ವೀಸಾದಡಿ ಬೆಂಗಳೂರಿಗೆ ಆಗಮಿಸಿದ್ದರು. ನಿನ್ನೆ ಸಂಜೆ ಹೋಟೆಲ್ ಸಿಬ್ಬಂದಿ ಎಷ್ಟೇ ಕೂಗಿದ್ರು ಮಹಿಳೆ ಬಂದಿರಲಿಲ್ಲ. ಹೀಗಾಗಿ ಇಂದು ಮಧ್ಯರಾತ್ರಿ ಮಾಸ್ಟರ್ ಕೀ ಮೂಲಕ ಬಾಗಿಲು ತೆಗೆದಾಗ ಮಹಿಳೆ ಶವಪತ್ತೆಯಾಗಿದೆ.


ಕೊಲೆಯಾಗಿರುವ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು, ಎಫ್ಎಸ್ಎಲ್ ತಂಡ ಹಾಗೂ ಡಾಗ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ಸಿಎಆರ್ಡಿಸಿಪಿ ಅರುಣಾಂಶು, ಕೇಂದ್ರ ವಿಭಾಗ ಡಿಸಿಪಿ ಶೇಖರ್ ಟೆಕ್ಕಣ್ಣನವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಆರೋಪಿ ಉಸಿರುಗಟ್ಟಿಸಿ ಮಹಿಳೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

- Advertisement -spot_img

More articles

- Advertisement -spot_img

Latest article