No menu items!
23.4 C
Munich
Saturday, May 2, 2026

ಬೆಂಗಳೂರಿನಲ್ಲಿ ದರೋಡೆ: ಮುಂಬೈನಲ್ಲಿ ಸಿಕ್ಕಿಬಿದ್ದ ದಂಪತಿ!

Must read

ಬೆಂಗಳೂರಿನಲ್ಲಿ ದರೋಡೆ: ಮುಂಬೈನಲ್ಲಿ ಸಿಕ್ಕಿಬಿದ್ದ ದಂಪತಿ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದರೋಡೆ ಮಾಡಿ ಎಸ್ಕೇಪ್ ಆಗಿದ್ದ ಖತರ್ನಾಕ್ ದಂಪತಿಯನ್ನು ಮುಂಬೈನಲ್ಲಿ ಬಂಧಿಸುವಲ್ಲಿ ಜಯನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಗಣೇಶ್ ಹಾಗೂ ಗೀತಾ ಎನ್ನಲಾಗಿದೆ. ಆರೋಪಿಗಳು ಸಂಪಿಗೆ ಥಿಯೇಟರ್ ಮಾಲೀಕ ನಾಗೇಶ್ ಅವರ ಮನೆಯಲ್ಲಿ 2 ವರ್ಷದಿಂದ ಕೆಲಸ ಮಾಡಿಕೊಂಡಿದ್ದರು. ಅ.2 ರಂದು ಜಯನಗರ 3ನೇ ಬ್ಲಾಕ್‍ನಲ್ಲಿರುವ ಮನೆಯಲ್ಲಿ ನಾಗೇಶ್ ಒಬ್ಬರೇ ಇದ್ದ ವೇಳೆ ದಂಪತಿ ಅವರ ಕೈಕಾಲು ಕಟ್ಟಿ 2ಲಕ್ಷ ರೂ. ನಗದು ಹಾಗೂ 1 ಕೆಜಿ ಚಿನ್ನವನ್ನು ದೋಚಿದ್ದರು.

ಈ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ಹಾಗೂ ಮೊಬೈಲ್ ನೆಟ್‍ವರ್ಕ್ ಆಧರಿಸಿ ಪೊಲೀಸರು ಆರೋಪಿಗಳನ್ನು ಮುಂಬೈನಲ್ಲಿ ಬಂಧಿಸಿದ್ದಾರೆ.

- Advertisement -spot_img

More articles

- Advertisement -spot_img

Latest article