ರಾಜಧಾನಿ ಬೆಂಗಳೂರಿನಲ್ಲಿ ಪ್ರೇಮಿಗಳಿಬ್ಬರ ಜಾಲಿ ರೈಡ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಯಲಹಂಕ ಸಂಚಾರಿ ಠಾಣಾ ವ್ಯಾಪ್ತಿಯ ರೇವಾ ಕಾಲೇಜು ಕ್ಯಾಂಪಸ್ ರಸ್ತೆಯಲ್ಲಿ ಘಟನೆ ಜರುಗಿದೆ. ಪ್ರೇಮಿಗಳಿಬ್ಬರ ಜಾಲಿರೈಡನ್ನ ಹಿಂಬದಿ ಸವಾರನೊಬ್ಬ ಮೊಬೈಲ್ನಲ್ಲಿ ಸೆರೆಹಿಡಿದು ನಂತರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದಾರೆ.
ಹೆಬ್ಬಾಳ ಘಟನೆಯ ನಂತರವು ಎಚ್ಚೆತ್ತುಕೊಳ್ಳದ ಪ್ರೇಮಿಗಳು ಜಾಲಿ ರೈಡ್ ಮಾಡಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಬೈಕ್ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿ ಕೂರಿಸಿ ಜಾಲಿ ರೈಡ್ ಮಾಡಿದ್ದ ಯುವಕನನ್ನು ಅರೆಸ್ಟ್ ಮಾಡಲಾಗಿತ್ತು.
ಈ ಘಟನೆ ನಂತರವು ಎಚ್ಚೆತ್ತುಕೊಳ್ಳದೇ ಜಾಲಿ ರೈಡ್ ಮಾಡಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಫುಲ್ ವೈರಲ್ ಆಗಿದೆ.