No menu items!
15.2 C
Munich
Wednesday, April 29, 2026

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

Must read

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರು: ಆಟೋ ಮತ್ತು ಕಾರಿಗೆ ಕ್ಯಾಂಟರ್​​ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಸುಮ್ಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ನಡೆದಿದೆ. ಆಟೋದಲ್ಲಿದ್ದ ಡಿ.ಯೇಸು, ಜೆನಿಫರ್ ಮೃತರು. ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಬ್ರೇಕ್ ಫೇಲ್ಯೂರ್ ಆಗಿ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಕ್ಯಾಂಟರ್​​​ ಡಿಕ್ಕಿಯಾದ ರಭಸಕ್ಕೆ ಆಟೋ ಎರಡು ತುಂಡಾಗಿದೆ. ಘಟನಾ ಸ್ಥಳಕ್ಕೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕಾಮಾಕ್ಷಿ ಪಾಳ್ಯ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

- Advertisement -spot_img

More articles

- Advertisement -spot_img

Latest article