ರಾಜಧಾನಿ ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಮತ್ತೆ ವಿಸ್ತರಣೆ ಮಾಡಲಾಗಿದೆ. ಸೆ. 27 ಕ್ಕೆ ಅಂತ್ಯವಾಗಲಿದ್ದ ನೈಟ್ ಕರ್ಫ್ಯೂವನ್ನು ಬೆಂಗಳೂರು ನಗರ ಪೊಲೀಸ್ ಕಮೀಷನರೇಟರ್ ವ್ಯಾಪ್ತಿಯಲ್ಲಿ ಅಕ್ಟೋಬರ್ 11 ರ ವರೆಗೂ ವಿಸ್ತರಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ ಪಂತ್ ಆದೇಶ ಮಾಡಿದ್ದಾರೆ. ರಾತ್ರಿ ಹತ್ತು ಗಂಟೆಯಿಂದ ಬೆಳಗ್ಗೆ ಐದು ಗಂಟೆವರೆಗೂ ನೈಟ್ ಕರ್ಫ್ಯೂ ನಿಯಮಗಳು ಅಸ್ತಿತ್ವದಲ್ಲಿರಲಿವೆ.
ಬೆಂಗಳೂರು ನಗರದಲ್ಲಿ ರಾತ್ರಿ ಕರ್ಫ್ಯೂ ವಿಸ್ತರಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ ಪಂತ್ ಆದೇಶ ಹೊರಡಿಸಿದ್ದಾರೆ. ಕರ್ಫ್ಯೂ ವೇಳೆ ಪಾಲಿಸಬೇಕಾದ ನಿಯಮ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿ ಮೇರೆಗೆ ಪರಿಷ್ಕೃತ ನೈಟ್ ಕರ್ಫ್ಯೂ ಆದೇಶವನ್ನು ಬಿಡುಗಡೆ ಮಾಡಿದ್ದಾರೆ.
ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ವಿಸ್ತರಣೆ ಮಾಡುವ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯದ ಕಾರ್ಯ ನಿರ್ವಹಣಾ ಪಡೆಯ ಅಧ್ಯಕ್ಷರು ಚರ್ಚಿಸಿ ಶಿಫಾರಸು ಮಾಡಿದ್ದಾರೆ. ಕೋವಿಡ್ ಸೋಂಕು ಹರಡುವ ಸಂಪರ್ಕ ಕೊಂಡಿ ತಪ್ಪಿಸುವ ಸಲುವಾಗಿ ಈ ನಿರ್ಬಂಧ ವಿಧಿಸಲಾಗಿದೆ. ಈ ಮೂಲಕ ಕೊರೊನಾ ಸೋಂಕು ನಿಯಂತ್ರಣಕ್ಕೆ ಕ್ರಮ ವಹಿಸಲು ಶಿಫಾರಸು ಮಾಡಲಾಗಿದೆ. ಅದರಂತೆ ಹಲವು ತಿಂಗಳಿನಿಂದಲೂ ರಾತ್ರಿ ವೇಳೆ ನೈಟ್ ಕರ್ಫ್ಯೂ ಜಾರಿಗೆ ತರಲಾಗಿದೆ.