ಬೆಂಗಳೂರಿನಲ್ಲಿ ಮಧ್ಯ ರಾತ್ರಿ ಮಹಿಳೆ ಮೇಲೆ ಅತ್ಯಾಚಾರ
ಬೆಂಗಳೂರು: ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ರೇಪ್ ಮಾಡಿ ಕೊಲೆ ಮಾಡಿರುವ ಘಟನೆ ತಲೆ ತಗ್ಗಿಸುವಂತೆ ಮಾಡಿದೆ. ಆದರೆ ಇದರ ನಡುವೆಯೇ ಬೆಂಗಳೂರಿನಲ್ಲಿ ಹೀನಾಯ ಕೃತ್ಯ ನಡೆದಿದೆ.
ಮಧ್ಯರಾತ್ರಿ ಬೆಂಗಳೂರಿನ ಕೋರಮಂಗಲದ ಪರಿಚಿತ ಮಹಿಳೆಯ ಮೇಲೆ ಮೂವರು ಸೇರಿ ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ನಡೆದಿದೆ. ಈ ಘಟನೆ ಕೋರಮಂಗಲದ ಜ್ಯೋತಿ ನಿವಾಸ ಜಂಕ್ಷನ್ ಬಳಿ ನಿನ್ನೆ ಮಧ್ಯರಾತ್ರಿ 1.30ರ ವೇಳೆಗೆ ನಡೆದಿದೆ. ಮೂವರು ಸೇರಿಕೊಂಡು ಮಹಿಳೆಯನ್ನು ಹಿರಿದು ಮುಕ್ಕಿದ್ದಾರೆ ಎಂದು ತಿಳಿದುಬಂದಿದೆ.
ಕೋರಮಂಗಲದ ಖಾಸಗಿ ಹೊಟೆಲ್ನ ಟೆರೆಸ್ನಲ್ಲಿ ಕೃತ್ಯ ಎಸಗಿದ್ದಾರೆ. ಪರಿಚಯಸ್ಥ ಮಹಿಳೆಯನ್ನು ಒಬ್ಬ ಟೆರೇಸ್ ಮೇಲೆ ಕರೆದಿಕೊಂಡು ಹೋಗಿದ್ದಾರೆ. ಈ ವೇಳೆ ಇನ್ನಿಬ್ಬರು ಅಲ್ಲೇ ಕಾದು ಕುಳಿತು ಆತನೊಂದಿಗೆ ಸೇರಿಕೊಂಡು ಮೂವರು ಸೇರಿ ಸಾಮೂಹಿಕ ಆತ್ಯಾಚಾರ ಮಾಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಬೆಳಗ್ಗೆ 5 ಗಂಟೆಗೆ ಸಂತ್ರಸ್ತ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಜೊತೆಗೆ, ಮಹಿಳೆಯ ದೂರನ್ನು ಆಧರಿಸಿ ಕೋರಮಂಗಲ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲು ಆಗಿದೆ. ಈ ಪ್ರಕರಣದ ಕುರಿತಂತೆ ಕೋರಮಂಗಲ ಪೊಲೀಸರು ಸದ್ಯ ಮೂವರನ್ನು ಅರೆಸ್ಟ್ ಮಾಡಿದ್ದಾರೆ.