No menu items!
8 C
Munich
Saturday, May 2, 2026

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ: 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Must read

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ: 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಮುಂದುವರಿದಿದ್ದು, ಇಂದೂ ಸಹ ಗುಡುಗು-ಸಿಡಿಲಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಕಲಬುರಗಿ, ಧಾರವಾಡ, ಗದಗ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜೊತೆಗೆ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಜೊತೆಗೆ ಮಳೆ ಜೋರಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

- Advertisement -spot_img

More articles

- Advertisement -spot_img

Latest article