No menu items!
17.6 C
Munich
Friday, April 24, 2026

ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ!

Must read

ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ!

ಬೆಂಗಳೂರು: ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ ಕಚೇರಿಗಳಿಗೆ ಮತ್ತೆ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇಟಲಿ ಹಾಗೂ ಜಪಾನ್ ಕಾನ್ಸುಲೇಟ್ಗಳ ಬಳಿಕ ಇದೀಗ ನೆದರ್ಲ್ಯಾಂಡ್ ರಾಯಭಾರಿ ಕಚೇರಿಗೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವುದು ಬೆಳಕಿಗೆ ಬಂದಿದೆ.
ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗಾನಗರದಲ್ಲಿರುವ ನೆದರ್ಲ್ಯಾಂಡ್ ರಾಯಭಾರಿ ಕಚೇರಿಗೆ ಜನವರಿ 29ರಂದು ಕಿಡಿಗೇಡಿಗಳು ಇ-ಮೇಲ್ ಕಳುಹಿಸಿ, ‘5 RDX ಮತ್ತು ಐಇಡಿ ಬಳಸಿ ಸ್ಫೋಟ ನಡೆಸುತ್ತೇವೆ’ ಎಂದು ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ರಾಯಭಾರಿ ಕಚೇರಿ ಅಧಿಕಾರಿ ಭಾಸ್ಕರ್ ಸುಬ್ರಹ್ಮಣಿ ಅವರು ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಈ ಹಿಂದೆ ಹಲಸೂರಿನಲ್ಲಿರುವ ಇಟಾಲಿಯನ್ ಕಾನ್ಸುಲೇಟ್ ಕಚೇರಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. gaina_ramesh@outlook.com ಎಂಬ ಇ-ಮೇಲ್ ವಿಳಾಸದಿಂದ bangalore.visa@esteri.it ಗೆ ಸಂದೇಶ ಕಳುಹಿಸಿ, ‘5 RDX ಬಾಂಬ್ ಸ್ಫೋಟ ಮಾಡುತ್ತೇವೆ’ ಎಂದು ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಇಟಾಲಿಯನ್ ಕಾನ್ಸುಲೇಟ್ ಭದ್ರತಾ ವ್ಯವಸ್ಥಾಪಕ ಜಿಯೋ ಡೊಮೆನಿಕೊ ಮಿಲಾನೋ ಅವರು ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇದರ ಬೆನ್ನಲ್ಲೇ ಕಬ್ಬನ್ ರಸ್ತೆಯಲ್ಲಿರುವ ಜಪಾನ್ ಕಾನ್ಸುಲೇಟ್ ಜನರಲ್ ಕಚೇರಿಗೂ ಅಪರಿಚಿತ ಸಂಖ್ಯೆಯಿಂದ ಕರೆ ಮಾಡಿ ಕೊಲೆ ಬೆದರಿಕೆ ಹಾಕಲಾಗಿದೆ. ‘Please be careful, someone will kill you’ ಎಂದು ಕರೆ ಬಂದಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸದ್ಯ ಇಟಲಿ, ಜಪಾನ್ ಮತ್ತು ನೆದರ್ಲ್ಯಾಂಡ್ ರಾಯಭಾರಿ ಕಚೇರಿಗಳಿಗೆ ಬಂದಿರುವ ಬೆದರಿಕೆ ಸಂದೇಶಗಳ ಮೂಲ ಪತ್ತೆಗೆ ಪೊಲೀಸರು ಇ-ಮೇಲ್ ಐಡಿ ಹಾಗೂ ಕರೆಗಳ ಜಾಡು ಹಿಡಿದು ತನಿಖೆ ನಡೆಸುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಸಂಬಂಧಿತ ರಾಯಭಾರಿ ಕಚೇರಿಗಳ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

- Advertisement -spot_img

More articles

- Advertisement -spot_img

Latest article