ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ!
ಬೆಂಗಳೂರು: ಮತ್ತೊಬ್ಬ ಶಂಕಿತ ಉಗ್ರನನ್ನು ಬೆಂಗಳೂರಿನಲ್ಲಿ ಅಸ್ಸಾಂ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಗಿರಿಸ್ ಬೋರಾ @ ಗೌತಮ್ ಬಂಧಿತ ಶಂಕಿತ ಉಗ್ರನಾಗಿದ್ದು, ಆನೇಕಲ್ ಬಳಿಯ ಜಿಗಣಿಯಲ್ಲಿ ಬಂಧಿಸಿದ್ದಾರೆ. ಗುವಾಹಟಿಯಲ್ಲಿ ಸುಧಾರಿತ ಸ್ಫೋಟಕವೊಂದನ್ನು ಇಟ್ಟು ಪರಾರಿಯಾಗಿದ್ದ ಆತನ ಬೆನ್ನು ಬಿದ್ದಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ಆತನನ್ನು ಬೆಂಗಳೂರಿನಲ್ಲಿ ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಶಂಕಿತ ಉಗ್ರ ಖಾಸಗಿ ಕಂಪನಿಯಲ್ಲಿ ಗೌತಮ್ ಎನ್ನುವ ಹೆಸರಲ್ಲಿ ಸೆಕ್ಯೂರಿಟಿಯಾಗಿ ಕೆಲಸಕ್ಕೆ ಸೇರಿದ್ದನು.
ಈ ಬಗ್ಗೆ ಪಕ್ಕಾ ಮಾಹಿತಿ ಆಧರಿಸಿದ ಅಸ್ಸಾಂ ಎನ್ಐಎ ಟೀಂ, ಶಂಕಿತ ಉಗ್ರನನ್ನು ಇದೀಗ ಬಂಧಿಸಿದೆ. ಬಂಧಿತನಿಂದ ಮೊಬೈಲ್ ಮತ್ತು ಒಂದಷ್ಟು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಇದೀಗ ಆತನನ್ನು ಎನ್ಐಎ ತಂಡ ಅಸ್ಸಾಂಗೆ ಕರೆದೊಯ್ದಿದೆ.