ಬೆಂಗಳೂರಿನಲ್ಲಿ ಸ್ನೇಹಿತರ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ

tnit editors
1 Min Read

ಬೆಂಗಳೂರಿನಲ್ಲಿ ಸ್ನೇಹಿತರ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಶುರುವಾಗಿದ್ದ ಇಬ್ಬರ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಹೊಸೂರು ಸರ್ವಿಸ್ ರಸ್ತೆ ಸಿಂಗಸಂದ್ರದಲ್ಲಿ ನಡೆದಿದೆ. ಜಗದೀಶ್ (40) ಕೊಲೆಯಾದ ದುರ್ಧೈವಿ, ಸಿದ್ದೇಶ್ ಎಂಬ ವ್ಯಕ್ತಿಯಿಂದ ಕೊಲೆಯಾಗಿದೆ. ತಡರಾತ್ರಿ ಸಿಂಗಸಂದ್ರ ಬಳಿ ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಲ್ಷಕ ಕಾರಣಕ್ಕೆ ಸಿದ್ದೇಶ್ ಹಾಗೂ ಜಗದೀಶ್ ನಡುವೆ ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಜಗದೀಶ್ ಮೇಲೆ ಕಲ್ಲು ಎತ್ತಿ ಹಾಕಿ ಸಿದ್ದೇಶ್ ಕೊಲೆ ಮಾಡಿದ್ದಾನೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಆರೋಪಿಯನ್ನು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article