ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯನ್ನು ಭೀಕರವಾಗಿ ಕೊಲೆಮಾಡಿರುವ ಘಟನೆ ಪುಲಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಗುಂಟೆ ಸಮೀಪ ನಡೆದಿದೆ. ಅಜಿತ್ ಕೊಲೆಯಾದ ವ್ಯಕ್ತಿಯಾಗಿದ್ದು, ಹಣಕಾಸಿನ ವಿಚಾರವಾಗಿ ಕೊಲೆ ಆಗಿರುವ ಶಂಕೆಯಾಗಿದೆ. ಏಕಾಏಕಿ ಬಂದ ಹಂತಕರು ಅಜೀತ್ ಎಂಬಾತನ ಮೇಲೆ ಹಲ್ಲೆ ಮಾಡಿ ಮನಬಂದಂತೆ ಕೊಚ್ಚಿ ಹಾಕಿದ್ದಾರೆ. ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.
ಅಜೀತ್ ಐಟಿಸಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಹಣಕಾಸಿನ ವಿಚಾರದಲ್ಲಿ ಕೊಲೆ ಆಗಿರಬಹುದು ಎಂದು ಶಂಕಿಸಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಬಡ್ಡಿ ವಿಚಾರದಲ್ಲಿ ಸಾಲವನ್ನು ಪಡೆದಿದ್ದರು. ಮನೆ ಎದುರೇ ನಡೆದ ಹತ್ಯೆ ಜನ ಬೆಚ್ಚಿಬಿದ್ದಿದ್ದಾರೆ. ಘಟನಾ ಸ್ಥಳಕ್ಕೆ ಪುಲಕೇಶಿನಗರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಈ ಘಟನೆ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, ಸದ್ಯ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.