ಹೈದರಾಬಾದ್ ಮೂಲದ ಕೋವಿಡ್ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್ ಬೆಂಗಳೂರಿನಲ್ಲಿ ಶೀಘ್ರವೇ ಲಸಿಕೆ ಉತ್ಪಾದನೆ ಮಾಡಲಿದೆ. ಜುಲೈ ಅಂತ್ಯದ ವೇಳೆಗೆ ಬೆಂಗಳೂರಲ್ಲಿ ಉತ್ಪಾದನೆ ಆರಂಭವಾಗುವ ನಿರೀಕ್ಷೆ ಇದೆ.
ಭಾರತ್ ಬಯೋಟೆಕ್ ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆ ಮಾಡುತ್ತದೆ. ಲಸಿಕೆ ಉತ್ಪಾದನೆಗೆ ಬೇಕಾದ ತಯಾರಿಗಳ ಬಗ್ಗೆ ಸರ್ಕಾರದ ಜೊತೆಗೆ ಪ್ರಕ್ರಿಯೆಗಳು ನಡೆಯುತ್ತಿವೆ. ಜುಲೈ ಅಂತ್ಯಕ್ಕೆ ಉತ್ಪಾದನೆ ಆರಂಭಿಸುವ ವಿಶ್ವಾಸವಿದೆ.
ಏಪ್ರಿಲ್‌ನಲ್ಲಿ ಭಾರತ್ ಬಯೋಟೆಕ್ ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರದಲ್ಲಿ ಕೊವ್ಯಾಕ್ಸಿನ್ ಉತ್ಪಾದನೆ ಮಾಡುವುದಾಗಿ ಘೋಷಣೆ ಮಾಡಿತ್ತು. ಬೆಂಗಳೂರು ನಗರದಲ್ಲಿ ವಾರ್ಷಿಕ 700 ಮಿಲಿಯನ್ ಡೋಸ್ ಲಸಿಕೆ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ.
ಮುಂದಿನ ದಿನಗಳಲ್ಲಿ ಹೈದರಾಬಾದ್ ಮೂಲದ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್ ಪ್ರತಿ ತಿಂಗಳು 10-12 ಮಿಲಿಯನ್ ಡೋಸ್ ಲಸಿಕೆಯನ್ನು ತಯಾರು ಮಾಡುವ ಗುರಿಯನ್ನು ಹೊಂದಿದೆ. ಇದಕ್ಕಾಗಿ ವಿವಿಧ ನಗರದಲ್ಲಿ ಉತ್ಪಾದನೆ ಆರಂಭಿಸಬೇಕಿದೆ.