No menu items!
13.7 C
Munich
Wednesday, May 20, 2026

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ

Must read

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ

ಬೆಂಗಳೂರು: ಕಳೆದ ಮೂರು–ನಾಲ್ಕು ದಿನಗಳಿಂದ ಬೆಂಗಳೂರು ತೀವ್ರ ಚಳಿಯಿಂದ ಕಂಪಿಸುತ್ತಿದೆ. ಇಂದು ಕೂಡ ಇಡೀ ದಿನ ಮೋಡಮಸುಕಿದ ವಾತಾವರಣ ಮುಂದುವರಿದಿದ್ದು, ಮೈಕೊರೆಯುವ ಚಳಿಯಿಂದಾಗಿ ಜನರು ಮನೆಯಿಂದ ಹೊರಬರಲು ಹಿಂಜರಿಯುವಂತಾಗಿದೆ. ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿದ್ದು, ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉದ್ಯಾನನಗರಿ ಬೆಂಗಳೂರಿನಲ್ಲಿ ಬೆಳಗ್ಗೆ, ಮಧ್ಯಾಹ್ನ, ಸಂಜೆ ಹಾಗೂ ರಾತ್ರಿ ಎಲ್ಲ ಸಮಯದಲ್ಲೂ ಚಳಿಯ ಪ್ರಭಾವ ಸ್ಪಷ್ಟವಾಗಿ ಕಾಣಿಸಿಕೊಂಡಿದೆ. ಬೆಚ್ಚನೆಯ ಉಡುಪು, ಸ್ವೆಟರ್, ಜಾಕೆಟ್ ಹಾಗೂ ಕ್ಯಾಪ್ ಧರಿಸಿ ಜನರು ಪಾರ್ಕ್‌ಗಳಲ್ಲಿ ವಾಕಿಂಗ್ ಮಾಡುತ್ತಿರುವ ದೃಶ್ಯಗಳು ಕಂಡುಬಂದವು. ಲಾಲ್‌ಬಾಗ್ ಸೇರಿದಂತೆ ವಿವಿಧ ಉದ್ಯಾನಗಳಲ್ಲಿ ಯುವಕರು, ಗೃಹಿಣಿಯರು ಹಾಗೂ ವಯೋವೃದ್ಧರು ಚಳಿಯ ನಡುವೆಯೂ ವಾಕಿಂಗ್ ಮಾಡಿ ಸಮಯ ಕಳೆಯುತ್ತಿದ್ದಾರೆ.

ಇಂದು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ನಿನ್ನೆ ಇದು 14 ಡಿಗ್ರಿಗೆ ಇಳಿಕೆಯಾಗಿತ್ತು. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮುಂದಿನ ನಾಲ್ಕು ದಿನಗಳ ಕಾಲ ಕನಿಷ್ಠ ತಾಪಮಾನ ಇದೇ ಮಟ್ಟದಲ್ಲಿ ಮುಂದುವರಿಯುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಡಿಪ್ರೆಶನ್‌ನ ಪರಿಣಾಮವಾಗಿ ಶೀತಗಾಳಿ ಹೆಚ್ಚಾಗಿ ಚಳಿ ತೀವ್ರಗೊಂಡಿದೆ. ಕೆಲವೆಡೆ ತುಂತುರು ಮಳೆಯೂ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ವಯೋವೃದ್ಧರು ಆರೋಗ್ಯದ ಬಗ್ಗೆ ಹೆಚ್ಚಿನ ಎಚ್ಚರ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

- Advertisement -spot_img

More articles

- Advertisement -spot_img

Latest article