ರಾಜಧಾನಿ ಬೆಂಗಳೂರಿನ ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ವಿಫಲರಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಂಗೆಣ್ಣಿಗೆ ಗುರಿಯಾಗಿರುವ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ವರ್ಗಾಯಿಸಲು ತೀರ್ಮಾನಿಸಲಾಗಿದೆ ಹಾಗು ಮಂಗಳೂರಿನಲ್ಲಿ ನಡೆದ ಪೊಲೀಸ್ ಗಲಭೆಯಲ್ಲಿ ವಿರೋಧ ಪಕ್ಷಗಳ ಕೆಂಗೆಣ್ಣಿಗೆ ಗುರಿಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಆಯುಕ್ತ ಡಾ.ಹರ್ಷ ಅವರನ್ನು ಕೂಡ ವರ್ಗಾವಣೆ ಮಾಡಲು ಸಿಎಂ ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೇ ರೀತಿ ಇನ್ನು ಕೆಲವು ಆಯಾಕಟ್ಟಿನ ಹುದ್ದೆಗಳಿಗೆ ದಕ್ಷ ಅಧಿಕಾರಿಗಳನ್ನು ನೇಮಿಸಲು ರಾಜ್ಯ ಸರ್ಕಾರ ಒಲವು ತೋರಿದೆ . ಹಾಗು ಮೂಲತಃ ಹಿಮಾಚಲ ಪ್ರದೇಶದವರಾದ ಪ್ರವೀಣ್‍ಸೂದ್ ತಮ್ಮ ಅಳಿಯ ಮಾಯಂಕ್ ಅಗರವಾಲ್ ಮೂಲಕವೂ ದೆಹಲಿಯ ಪ್ರಮುಖ ನಾಯಕರೊಬ್ಬರ ಮೇಲೆ ಪ್ರಭಾವ ಬೀರಿದ್ದಾರೆಂದು ತಿಳಿದುಬಂದಿದೆ. ಜೊತೆಗೆ ಯಡಿಯೂರಪ್ಪ ಕೂಡ ಸೂದ್ ಅವರನ್ನು ನೇಮಿಸಲು ಒಲವು ತೋರಿದ್ದಾರೆೆ ಎಂದು ಹೇಳಲಾಗುತ್ತಿದೆ .
ಬೆಂಗಳೂರಿನ ಪೋಲಿಸ್ ಆಯುಕ್ತ ಭಾಸ್ಕರ್ ರಾವ್ ಮಂಗಳೂರಿನ ಡಾ.ಹರ್ಷ ಅವರನ್ನು ಕೂಡ ವರ್ಗಾವಣೆ ಮಾಡಲು ಸಿಎಂ ತೀರ್ಮಾನ !?
Date: