ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿಗೆ ಬಾಂಬ್ ಬೆದರಿಕೆ, ಪ್ರಿನ್ಸಿಪಾಲರನ್ನು ಕೊಲ್ಲುತ್ತೇವೆ ಎಂದ ನೀಚರು!
ಬೆಂಗಳೂರು:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೋಲದೇವನಹಳ್ಳಿಯಲ್ಲಿರುವ ಪ್ರತಿಷ್ಠಿತ ಆಚಾರ್ಯ ಕಾಲೇಜಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕೀಚಕರು ಪ್ರಿನ್ಸಿಪಾಲ್ ಕೊಲ್ಲುವುದಾಗಿ ಬೆದರಿಕೆ ಹೊಡ್ಡಿದ್ದಾರೆ.
ಆಚಾರ್ಯ ಕಾಲೇಜಿನ ಅಧಿಕೃತ ಇ-ಮೇಲ್ ಪರಿಶೀಲನೆ ವೇಳೆ ಬೆರಿಕೆ ಸಂದೇಶ ಗಮನಕ್ಕೆ ಬಂದಿದೆ. ಸದ್ಯ ಕಾಲೇಜಿನ ಆಡಳಿತ ಮಂಡಳಿ ಸೋಲದೇವನಹಳ್ಳಿ ಠಾಣೆಗೆ ದೂರು ನೀಡಿದೆ. ಘಟನೆ ಸಂಬಂಧ ಎನ್ಸಿಆರ್ ದಾಖಲಿಸಿಕೊಂಡಿರುವ ಸೋಲದೇವನಹಳ್ಳಿ ಪೊಲೀಸರು ನಂತರ ನ್ಯಾಯಾಲಯದ ಅನುಮತಿ ಪಡೆದು ಎಫ್ಐಆರ್ ದಾಖಲಿಸಿದ್ದಾರೆ.
ಸದ್ಯ ತನಿಖೆ ಮುಂದುವರಿಸಿದ್ದಾರೆ.