No menu items!
5.3 C
Munich
Wednesday, September 23, 2026

ಬೆಂಗಳೂರಿನ ಫುಟ್ ಬಾತ್ ನಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆ!

Must read

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ. ರಾಮಮೂರ್ತಿನಗರ ಬಳಿ ಇರುವ ಫ್ಲೈ ಓವರ್ ಬಳಿ ಬ್ಯಾಗ್ ಪತ್ತೆಯಾಗಿದೆ. ಬ್ಯಾಗ್ ನೋಡಿ ಭಯಗೊಂಡಿರುವ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳಕ್ಕೆ ರಾಮಮೂರ್ತಿನಗರ ಠಾಣೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ
ನಿನ್ನೆ ಅಷ್ಟೇ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ, ಸಿಬ್ಬಂದಿ ಕಚೇರಿಯನ್ನು ಸ್ಫೋಟಿಸುವುದಾಗಿ ಶೌಚಾಲಯದ ಕನ್ನಡಿ ಮೇಲೆ ಬೆದರಿಕೆ ಸಂದೇಶ ಬರೆಯಲಾಗಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಕೂಡಲೆ ಶ್ವಾನದಳ‌ ಹಾಗೂ ಸಿಐಎಸ್‌ಎಫ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಬಳಿಕ ಅದೊಂದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿತ್ತು

- Advertisement -spot_img

More articles

- Advertisement -spot_img

Latest article