ಬೆಂಗಳೂರು: ಕೋರಮಂಗಲದ ವಿ.ಆರ್.ಲೇಔಟ್ʼನಲ್ಲಿ ಮಹಿಳಾ ಪಿ.ಜಿ ಒಳಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಬರ್ಬರ ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಕೃತಿ ಕುಮಾರಿ (24) ಮೃತ ದುರ್ಧೈವಿಯಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೃತಿ ಕುಮಾರಿ ಕೆಲಸ ಮಾಡುತ್ತಿದ್ದರು.
ತಡರಾತ್ರಿ ಚಾಕು ಹಿಡಿದು ಪಿ.ಜಿಯೊಳಗೆ ನುಗ್ಗಿದ ಆರೋಪಿ, 3ನೇ ಮಹಡಿಯಲ್ಲಿನ ರೂಮಿನ ಸಮೀಪದಲ್ಲೇ ಯುವತಿ ಮೇಲೆ ಚಾಕುವಿನಿಂದ ಕತ್ತು ಕೊಯ್ದು ಕೊಲೆಗೈದು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪರಿಚಯಸ್ಥ ವ್ಯಕ್ತಿಯಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇನ್ನೂ ಘಟನೆ ಸಂಬಂಧ ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ..!
Date: