ಬೆಂಗಳೂರಿನ ವಾಹನ ಸವಾರರೇ ಇಲ್ಲಿ ಕೇಳಿ: 2 ದಿನ ಈ ರಸ್ತೆಗಳು ಬಂದ್ !

Date:

ಬೆಂಗಳೂರು:- ಬೆಂಗಳೂರಿನ ಈ ರಸ್ತೆಗಳಲ್ಲಿ 2 ದಿನ ಸಂಚಾರ ಬಂದ್ ಆಗಲಿದ್ದು, ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ.

ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು, ಬದಲಿ ಮಾರ್ಗ ಸೂಚಿಸಿದ್ದು, ಬದಲಿ ಮಾರ್ಗ ಉಪಯೋಗಿಸುವಂತೆ ಕೋರಿದ್ದಾರೆ.

ನಾಳೆ ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಳೆ ಆರೋಗ್ಯ ಮಾತೆಯ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಸೇರುವ ನಿರೀಕ್ಷೆ ಇದೆ. ಹೀಗಾಗಿ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ವಾಹನ ಸಂಚಾರ ಬಂದ್​ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸ್​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಸೆಪ್ಟೆಂಬರ್​ 8 ರವಿರಾದಂದು ಆರೋಗ್ಯ ಮಾತೆಯ ರಥೋತ್ಸವ ಕಾರ್ಯಕ್ರಮದ ನಡೆಯುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಂಚಾರ ನಿರ್ಬಂಧಿಸಲಾಗಿದೆ. ಸಂಚಾರ ನಿರ್ಬಂಧಿಸಿರುವ ರಸ್ತೆಗಳು:

ಜ್ಯೋತಿಕೆಫೆ ವೃತ್ತದಿಂದ ರಸಲ್ ಮಾರ್ಕೆಟ್​ವರೆಗೆ ರಸ್ತೆಯ ಎರಡು ಬದಿಯಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಬ್ರಾಡ್‌ ವೇ ರಸ್ತೆಯಲ್ಲಿ ರಸಲ್ ಮಾರ್ಕೆಟ್​ಕಡೆಗೆ ರಸ್ತೆಯ ಎರಡು ಬದಿಯಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಧರ್ಮರಾಜ ಕೋಯಿಲ್ ಸ್ಪೀಟ್ – ಓ.ಪಿ.ಹೆಚ್.ರಸ್ತೆ ವರೆಗೆ ರಸಲ್ ಮಾರ್ಕೆಟ್​ಕಡೆಗೆ ಬರುವ ವಾಹನ ಸಂಚಾರವನ್ನು ತಾಜ್ ವೃತ್ತದಲ್ಲಿ ನಿರ್ಬಂಧಿಸಲಾಗಿದೆ.

ಬಿ.ಆರ್.ವಿ ಜಂಕ್ಷನ್​ನಿಂದ ಶಿವಾಜಿನಗರ ಬಸ್ ನಿಲ್ದಾಣಕ್ಕೆ ಬರುವ ಬಿ.ಎಂ.ಟಿ.ಸಿ ಬಸ್‌ಗಳು ಸೇರಿದಂತೆ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಬಾಳೇ ಕುಂದ್ರಿ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣಕ್ಕೆ ಬರುವ ಬಿ.ಎಂ.ಟಿ.ಸಿ ಬಸ್‌ಗಳು ಸೇರಿದಂತೆ ಎಲ್ಲ ಮಾದರಿಯ ವಾಹನಗಳನ್ನು ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು:

ಅನಿಲ್ ಕುಂಬ್ಳೆ ಜಂಕ್ಷನ್ ಕಡೆಯಿಂದ ಬರುವ ಬಿ.ಎಂ.ಟಿ.ಸಿ ಬಸ್‌ಗಳು ಬಿ.ಆರ್.ವಿ ಜಂಕ್ಷನ್‌ನಲ್ಲಿ ಎಡತಿರುವು ಪಡೆದು- ಸಿ.ಟಿ.ಓ- ಕ್ಲೀನ್ಸ್ ಸರ್ಕಲ್- ಎಂ.ಜಿ ರಸ್ತೆ ಮೂಲಕ ಸಂಚರಿಸಬಹುದು.

ದ್ವಿಚಕ್ರ ಹಾಗೂ ಲಘು ಮೋಟಾರ್ ವಾಹನಗಳು ಬಿ.ಆರ್.ವಿ ಸೆಂಟ್ರಲ್ ಸ್ಟ್ರೀಟ್ – ಬಲ ತಿರುವು – ಸಫೀನಾ ಪ್ಲಾಜಾ -ಕಮರ್ಷಿಯಲ್ ಸ್ಟ್ರೀಟ್-ಕಾಮರಾಜ ರಸ್ತೆ ಮೂಲಕ ಸಂಚರಿಸಬಹುದು.

ದ್ವಿಚಕ್ರ ಹಾಗೂ ಲಘು ಮೋಟಾರ್ ವಾಹನಗಳು ಬಿ.ಆರ್.ವಿ-ಸೆಂಟ್ರಲ್ ಸ್ಟ್ರೀಟ್ – ಸೆಲೆಕ್ಟ್ ಜಂಕ್ಷನ್ ಎಡ ತಿರುವು ರಮಡಾ ಹೋಟೆಲ್-ವಿ.ಎಸ್.ಎನ್ ರಸ್ತೆ ಮೂಲಕ ಸಂಚರಿಸಬಹುದು.

ವಾಹನಗಳ ನಿಲುಗಡೆ ನಿರ್ಬಂಧಿಸಿರುವ ಸ್ಥಳಗಳು:
ರಸಲ್ ಮಾರ್ಕೆಟ್ ಸುತ್ತ-ಮುತ್ತ – ಬ್ರಾಡ್‌ವೇರಸ್ತೆ – ಮೀನಾಕ್ಷಿಕೋಯಿಲ್ ಸ್ಟ್ರೀಟ್ – ಸೆಂಟ್ರಲ್ ಸ್ಟ್ರೀಟ್ ಶಿವಾಜಿ ರಸ್ತೆ – ಬಾಳೇ ಕುಂದ್ರಿ ವೃತ್ತದಿಂದ ಚಂದ್ರಿಕಾ ಹೋಟೆಲ್ ವರೆಗೂ (ಕನ್ನಿಂಗ್ ಹ್ಯಾಮ್ ರಸ್ತೆ) ಯೂನಿಯನ್ ಸ್ಟ್ರೀಟ್ ಇನ್ ಫೆಂಟ್ರಿರಸ್ತೆ ಸ್ಪೀಟ್ – ಎಂ.ಜಿರಸ್ತೆ ಕಬ್ಬನ್‌ರಸ್ತೆ ಲೇಡಿಕರ್ಜನ್‌ ರಸ್ತೆ ವಿ.ಎಸ್.ಎನ್‌ ರಸ್ತೆ ಪ್ಲೇನ್ ಸ್ಟ್ರೀಟ್​-ಎಂಜಿರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...