ಬೆಂಗಳೂರಿನ ವಿವಿಧ ಕಡೆ ರಾತ್ರೋ ರಾತ್ರಿ DCM ಪೋಸ್ಟರ್!

Date:

ಬೆಂಗಳೂರು:- ಪ್ರಜ್ವಲ್ ವಿರುದ್ಧದ ಪೆನ್ ಡ್ರೈವ್ ಪ್ರಕರಣದಲ್ಲಿ ಡಿಕೆಶಿ ಕೈವಾಡ ಇದೆ ಎಂಬ ವಕೀಲ ದೇವರಾಜೇಗೌಡ ಹೇಳಿಕೆ ಬೆನ್ನಲ್ಲೇ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರಿನ ವಿವಿಧ ಕಡೆ ರಾತ್ರೋ ರಾತ್ರಿ ಡಿಕೆ ಶಿವಕುಮಾರ್ ವಿರುದ್ಧದ ಪೋಸ್ಟರ್ ಗಳು ಕಂಡು ಬಂದಿದೆ. ಪೆನ್ ಡ್ರೈವ್ ಪ್ರಕರಣದಲ್ಲಿ ಡಿಕೆಶಿ ಪಾತ್ರ ಇದೆ ಎಂಬ ದೇವರಾಜಗೌಡ ಹೇಳಿಕೆ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆಶಿ ವಿರುದ್ಧ ಪೋಸ್ಟರ್ ವಾರ್ ಶುರುವಾಗಿದೆ. ಲುಲು ಮಾಲ್, ಕೆಪಿಸಿಸಿ ಕಛೇರಿ ಸೇರಿದಂತೆ ಬೆಂಗಳೂರಿನ ವಿವಿಧ ಕಡೆಗಳಲ್ಲಿ ಪೋಸ್ಟರ್ ಅಂಟಿಸಲಾಗಿದೆ.

ಇನ್ನೂ ಪ್ರಕರಣದ ರೂವಾರಿ ಬೇರೆ ಯಾರೂ ಅಲ್ಲ ಒನ್ ಆಂಡ್ ಓನ್ಲಿ ಡಿಸಿಎಂ ಡಿಕೆ. ಶಿವಕುಮಾರ್ ಎಂದಿರುವ ವಕೀಲ ದೇವರಾಜೇಗೌಡ, ಡಿಕೆ ಶಿವಕುಮಾರ್ ಆಫರ್ ಕೊಟ್ಟರು ಎನ್ನಲಾದ ಆಡಿಯೋ ಬಿಡುಗಡೆ ಮಾಡಿದ್ದಾರೆ. ಆದರೆ ದೇವರಾಜೇಗೌಡ ಅರ್ಧಂಬರ್ಧ ಆಡಿಯೋ ಪ್ಲೇ ಮಾಡಿದ್ದು, ಫುಲ್ ಆಡಿಯೋ ಪ್ಲೇ ಮಾಡಲು ಆಗಲ್ಲ ಎಂದು ದೇವರಾಜೇಗೌಡ ತಿಳಿಸಿದ್ದಾರೆ. ಪ್ಲೇ ಮಾಡಿದ ಆಡಿಯೋದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ‘ಹೇಳ್ರಿ ಏನು ವಿಚಾರ’ ಎನ್ನುವ ಮಾತಷ್ಟನ್ನೇ ಕೇಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಎಸ್ಐಟಿ ಅಧಿಕಾರಿ ಸುಮನ್ ಪೆನ್ನೇಕಾರ್ ಫೋಟೋ ತೋರಿಸಿದ ವಕೀಲ ದೇವರಾಜೇಗೌಡ, ಇವರು ನನ್ನ ಹೇಳಿಕೆಯಲ್ಲಿರುವ ಡಿಕೆ ಶಿವಕುಮಾರ್ ಅವರ ಹೆಸರನ್ನು ತೆಗೆಯಲು ಹೇಳಿದ್ದರು ಎಂದು ಆರೋಪಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...