ಬೆಂಗಳೂರಿನ ಹಲಸೂರು ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಸಂದೇಶ

Date:

ಬೆಂಗಳೂರಿನ ಹಲಸೂರು ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಸಂದೇಶ

 

ಬೆಂಗಳೂರು: ನಗರದ ಹಲಸೂರು ಕೆರೆ ಸಮೀಪ ಇರುವ ಗುರುಸಿಂಗ್ ಸಭಾ ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ನಾಲ್ಕು ದಿನಗಳ ಹಿಂದೆ ಬಂದ ಈ ಇ-ಮೇಲ್ ಕುರಿತು ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ ಗಿರಿ ಎಂಬಾತನ ಹೆಸರಿನಲ್ಲಿ ಕಳುಹಿಸಲಾದ ಸಂದೇಶದಲ್ಲಿ ನಾಲ್ಕು ಆರ್‌ಡಿಎಕ್ಸ್ ಸ್ಫೋಟಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಜೊತೆಗೆ, ಗುರುದ್ವಾರದ ಶೌಚಾಲಯದಲ್ಲಿ ಬಾಂಬ್ ಇಟ್ಟಿದ್ದಾಗಿ ಉಲ್ಲೇಖಿಸಲಾಗಿತ್ತು. ಈ ಕುರಿತು ಋಷಿಪಾಲ್ ಸಿಂಗ್ ಎಂಬವರು ಪೊಲೀಸರಿಗೆ ದೂರು ಸಲ್ಲಿಸಿದ್ದು, ಅದರ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಘಟನೆ ಬಳಿಕ ಪೊಲೀಸರು ಗುರುದ್ವಾರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಿದ್ದು, ಬಾಂಬ್ ಪತ್ತೆ ದಳ ಸ್ಥಳದಲ್ಲಿ ಪರಿಶೀಲನೆ ನಡೆಸಿದೆ. ಇ-ಮೇಲ್ ಕಳುಹಿಸಿದವರ ಪತ್ತೆಹಚ್ಚಲು ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...