ಬೆಂಗಳೂರಿನ 3 ಹೋಟೆಲ್ʼ ಗಳಿಗೆ ಬಾಂಬ್ ಬೆದರಿಕೆ ಇ-ಮೇಲ್‌

0
19

ಬೆಂಗಳೂರು: ದೆಹಲಿಯ ವಿಮಾನ ನಿಲ್ದಾಣ ಹಾಗೂ ಹಲವು ಆಸ್ಪತ್ರೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದ ಬೆನ್ನಲ್ಲೇ ಬೆಂಗಳೂರಿನ ಮೂರು ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಎಲೆಕ್ಟ್ರಾನಿಕ್ ಸಿಟಿಯ ಬಳಿಯ ಒಟೇರಾ ಹೋಟೆಲ್ ಸೇರಿ ಮೂರು ಹೋಟೆಲ್ ಗೆ ಮೇಲ್ ಬಂದಿದೆ.
ನಸುಕಿನ ಜಾವ 2 ಗಂಟೆ ಸುಮಾರಿಗೆ ಇಮೇಲ್‌ ಬಂದಿದ್ದು, ಇಂದು ಬೆಳಗ್ಗೆ ಹೋಟೆಲ್ ಸಿಬ್ಬಂದಿ ಇಮೇಲ್ ಚೆಕ್ ಮಾಡುವಾಗ ಬೆಳಕಿಗೆ ಬಂದಿದೆ. ಕೂಡಲೇ ಗಾಬರಿಗೊಂಡ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಒಟೇರಾ ಹೋಟೆಲ್ ಗೆ ಬಾಂಬ್ ಸ್ಕ್ವಾಡ್ ಮತ್ತು ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.