No menu items!
6 C
Munich
Saturday, May 16, 2026

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

Must read

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು: ನಗರದಲ್ಲಿ ಇಂದು ಸ್ಪಷ್ಟ ಆಕಾಶವಿದ್ದು, ತಾಪಮಾನದಲ್ಲಿ ಸ್ವಲ್ಪ ಏರಿಕೆ ಕಾಣುವ ಸಾಧ್ಯತೆ ಇದೆ. ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ಒಣಹವೆಯ ವಾತಾವರಣ ಮುಂದುವರಿದಿದ್ದು, ಮುಂದಿನ ಕೆಲ ದಿನಗಳೂ ಮಳೆಯ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ. ಮಳೆ ಲಕ್ಷಣಗಳು ಕಂಡುಬರದ ಹಿನ್ನೆಲೆಯಲ್ಲಿ ಬಿಸಿಲಿನ ತೀವ್ರತೆ ಕ್ರಮೇಣ ಹೆಚ್ಚುವ ಸಾಧ್ಯತೆ ಇದೆ.
ಮಾರ್ಚ್ ಎರಡನೇ ವಾರದ ಬಳಿಕ ಬೆಂಗಳೂರಿನಲ್ಲಿ ಉಷ್ಣಾಂಶ ಇನ್ನಷ್ಟು ಏರಿಕೆಯಾಗುವ ಸೂಚನೆಗಳಿವೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸಾರ್ವಜನಿಕರಿಗೆ ಸೂಚನೆ ನೀಡಿದೆ.
ಹೀಟ್ ಸ್ಟ್ರೋಕ್ ಹಾಗೂ ದೇಹದ ನೀರಿನ ಕೊರತೆ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಹಾಗೂ ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಜಾಗ್ರತೆ ವಹಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಹೆಚ್ಚು ನೀರು ಕುಡಿಯುವುದು, ತಂಪು ಪಾನೀಯಗಳು ಮತ್ತು ಹಣ್ಣುಗಳನ್ನು ಸೇವಿಸುವ ಮೂಲಕ ದೇಹದ ತಾಪಮಾನ ನಿಯಂತ್ರಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article