ಬೆಂಗಳೂರು – ಕೊಲ್ಕತ್ತಾ ಇಂದಿನ ಪಂದ್ಯ ರದ್ದು!

0
360

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯವನ್ನು ಇಂದು ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಂಜೆ 7.30ಕ್ಕೆ ನಡೆಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಇದೀಗ ಬಂದಿರುವ ಸುದ್ದಿಯ ಪ್ರಕಾರ ಇಂದು ನಡೆಯಬೇಕಿದ್ದ ಪಂದ್ಯವನ್ನು ರದ್ದುಗೊಳಿಸ ಲಾಗಿದ್ದು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದು ಬಿಸಿಸಿಐ ತಿಳಿಸಿದೆ.

 

 

ಕೋಲ್ಕತಾ ನೈಟ್ ರೈಡರ್ಸ್ ತಂಡದ ಆಟಗಾರರಾದ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಕೋಲ್ಕತಾ ನೈಟ್ ರೈಡರ್ಸ್ ತಂಡದ ಈ ಇಬ್ಬರೂ ಆಟಗಾರರಿಗೆ ಕೊರೋನಾ ಸೊಂಕು ತಗುಲಿದ ಹಿನ್ನೆಲೆಯಲ್ಲಿ ತಂಡದ ಇತರ ಆಟಗಾರರನ್ನು ಐಸೊಲೇಷನ್ ಮಾಡಲಾಗಿದ್ದು ಇಂದಿನ ಪಂದ್ಯವನ್ನಾಡಲು ಅಲಭ್ಯರಾದ ಕಾರಣ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.