ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ, ಅಶ್ವಥ್ ನಾರಾಯಣ್, ಮುನಿರತ್ನ ಹಾಗೂ ಡಾ.ಮಂಜುನಾಥ್ ಪೂಜೆ ಸಲ್ಲಿಸಿದ್ದಾರೆ. ಬಳಿಕ ನಾಮಪತ್ರ ಸಲ್ಲಿಸಲು ತಡವಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೆರವಣಿಗೆ ರದ್ದು ಮಾಡಿ ನೇರವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ತಡವಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೆರವಣಿಗೆ ರದ್ದು ಮಾಡಿ ನೇರವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಮಂಜುನಾಥ್ ಅವರಿಗೆ ಅವರ ಪತ್ನಿ ಅನುಸೂಯ, ಎಮ್.ಕೃಷ್ಣಪ್ಪ ಹಾಗೂ ಚಿಂತಕಿ ಸುಧಾ ಬರಗೂರು ಸಾಥ್ ಕೊಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ಎನ್ಡಿಎ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ನಾಮಪತ್ರ ಸಲ್ಲಿಕೆ
Date: