ಬೆಂಗಳೂರು :ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಸಿ.ಎನ್ ಮಂಜುನಾಥ್ ಅವರಿಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಅಧಿಕೃತವಾಗಿ ಇನ್ನೆರಡು ದಿನಗಳಲ್ಲಿ ಬಿಜೆಪಿ ಸೇರುತ್ತೇನೆ. ಯಡಿಯೂರಪ್ಪನವರ ಜೊತೆಗೆ ಚರ್ಚೆ ಮಾಡಿದ್ದೇವೆ. ಲೋಕಸಭಾ ಚುನಾವಣೆ ಅಂದರೇನೇ ರಾಜಕೀಯ. ಆದರೆ, ನಾನು ರಾಜಕೀಯ ಮಾಡಲ್ಲ ಎಂದರು.
ಚುನಾವಣೆಗೆ ನಿಂತ ಮೇಲೆ ಎಲ್ಲವೂ ಬಂದೇ ಬರುತ್ತದೆ. ಪ್ರಧಾನಿ ಮೋದಿಯವರ ಜನಪ್ರಿಯತೆ ಹಾಗೂ ಬಿಎಸ್ ಯಡಿಯೂರಪ್ಪ ಅವರ ನಾಯಕತ್ವ, ಹೆಚ್ ಡಿ ದೇವೇಗೌಡ ಮತ್ತು HD ಕುಮಾರಸ್ವಾಮಿ ಅವರ ಸಲಹೆಯಂತೆ ಕೆಲಸ ಮಾಡುತ್ತೇನೆ. ಎಲ್ಲ ರೀತಿಯಲ್ಲಿ ಚುನಾವಣೆ ಎದುರಿಸಲು ನಾನು ಸಿದ್ಧನಾಗಿದ್ದೇನೆ ಎಂದು ಹೇಳಿದರು.
ಇನ್ನು ನಾನು ಸುಧೀರ್ಘವಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದಿದ್ದೇನೆ. ನನ್ನ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಅಂತರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಸಿಗುವ ಕೆಲಸ ಆಗುತ್ತಿದೆ. ಮೋದಿ ಸರ್ಕಾರ ಹೆಚ್ಚು ಸಾಧಕರಿಗೆ, ಪರಿಣಿತರಿಗೆ ಪ್ರೋತ್ಸಾಹ ಕೊಡುತ್ತಿದ್ದಾರೆ. ಇದರಿಂದಲೇ ಇವತ್ತು ನಾನು ಲೋಕಸಭಾ ಚುನಾವಣಾ ಎದುರಿಸುತ್ತಿದ್ದೇನೆ ಎಂದರು
ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆ: ಡಾಕ್ಟರ್ ಮಂಜುನಾಥ್ ಹೇಳಿದ್ದೇನು..?
Date: