ಬೆಂಗಳೂರು ಜ್ಯೋತಿಷಿ ಮಾತು ನಿಜವಾಯ್ತು – ಕೊಹ್ಲಿ-ಅನುಷ್ಕಾ ದಂಪತಿಗೆ‌ ಹೆಣ್ಣು ಮಗು

Date:

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಜೋಡಿ ಸೋಮವಾರ ಮುದ್ದಾದ ಹೆಣ್ಣು ಮಗುವಿನ ಜನ್ಮನೀಡಿದ್ದಾರೆ. ಅಂದಹಾಗೆ ಕೆಲ ತಿಂಗಳ ಹಿಂದೆ ವಿರುಷ್ಕಾ ಜೋಡಿ ತಮ್ಮ ಕುಟುಂಬಕ್ಕೆ ನೂತನ ಸದಸ್ಯರ ಆಗಮನ ಜನವರಿಯಲ್ಲಿ ಆಗಲಿದೆ ಎಂಬ ಸುದ್ದಿಯನ್ನು ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್ ಮೂಲಕ ಹಂಚಿಕೊಂಡಿದ್ದರು.
ಇದರ ಬೆನ್ನಲ್ಲೇ ಕೋಟ್ಯಂತರ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಸೋಷಿಯಲ್‌ ಮೀಡಿಯಾ ವೇದಿಕೆಗಳ ಮೂಲಕ ಶುಭ ಹಾರೈಸಿದ್ದರು ಕೂಡ. ಅಷ್ಟೇ ಅಲ್ಲದೆ ಬೆಂಗಳೂರಿನ ಪ್ರಖ್ಯಾತ ಜ್ಯೋತಿಷಿ ಪಂಡಿತ್‌ ಜಗನ್ನಾಥ ಅವರು ವಿರುಷ್ಕಾ ಜೋಡಿಗೆ ಹೆಣ್ಣು ಮಗು ಜನಿಸಲಿದೆ ಎಂದು ಕರಾರುವಾಕ್‌ ಭವಿಷ್ಯ ನುಡಿದಿದ್ದರು.
ಇಂದು ಪಂಡಿತ್ ಜಗನ್ನಾಥರು ಹೇಳಿದ್ದ ಭವಿಷ್ಯ ಅಕ್ಷರಶಃ ನಿಜವಾಗಿದೆ. ಕೊಹ್ಲಿ ಕುಟುಂಬಕ್ಕೆ ಮುದ್ದಾದ ಹೆಣ್ಣು ಮಗುವಿನ ಸೇರ್ಪಡೆಯಾಗಿದೆ. ಅಂದಹಾಗೆ ಕಳೆದ 25 ವರ್ಷಗಳಿಂದ ಜೋತಿಷ್ಯ ಶಾಸ್ತ್ರದಲ್ಲಿ ಪಳಗಿರುವ ಜಗನ್ನಾತ್ ಹಲವಾರು ಮಂದಿಗೆ ಮಾರ್ಗದರ್ಶನ ನೀಡಿದ್ದಾರೆ.
“ಹುಟ್ಟುವ ಮಗು ಹೆಣ್ಣಾಗಲಿ ಅಥವಾ ಗಂಡಾಗಲಿ, ಇಬ್ಬರಲ್ಲೂ ಸಮಾನ ಸಾಮರ್ಥ್ಯ ಇರಲಿದೆ. ಇಂದು ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳೇ ಪ್ರತಿಯೊಂದರಲ್ಲೂ ಮುಂದಿದ್ದಾರೆ. ಆದರೆ, ವಿರಾಟ್‌ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರ ಮುಖ ಗಮನಸಿ ಲೆಕ್ಕಾಚಾರ ಮಾಡಿ ಹೇಳುವುದಾದರೆ ಇವರಿಗೆ ಹೆಣ್ಣು ಮಗು ಆಗುವ ಸಾಧ್ಯತೆ ಹೆಚ್ಚಿದೆ,” ಎಂದು ಗುರುಜಿ ಹೇಳಿದ್ದನ್ನು ಏಷ್ಯಾನೆಟ್‌ ಸುದ್ದಿವಾಹಿನಿ ವರದಿ ಮಾಡಿತ್ತು.
ಕೊಹ್ಲಿ, ತಂದೆಯಾದ ಸುದ್ದಿಯನ್ನು ಸೋಷಿಯಲ್‌ ಮೀಡಿಯಾ ವೇದಿಕೆಗಳ ಮೂಲಕ ಅಭಿಮಾನಿಗಳೊಟ್ಟಿಗೆ ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್, ಟ್ವಿಟರ್‌ ಮತ್ತು ಫೇಸ್‌ಬುಲ್‌ನಲ್ಲಿ ಏಕಕಾಲದಲ್ಲಿ ಅಪ್‌ಡೇಟ್‌ ನೀಡಿದ ಕಿಂಗ್‌ ಕೊಹ್ಲಿ, ವಿಶೇಷ ಸಂದೇಶವೊಂದನ್ನೂ ಬರೆದಿದ್ದಾರೆ.
“ಇಂದು ಮಧ್ಯಾನ ಮುದ್ದಾದ ಹೆಣ್ಣು ಮಗು ಜನಿಸಿದೆ ಎಂಬ ಸುದ್ದಿ ನಿಮ್ಮೊಟ್ಟಿಗೆ ಹಂಚಿಕೊಳ್ಳಲು ರೋಮಾಂಚನವಾಗುತ್ತಿದೆ. ನಿಮ್ಮೆಲ್ಲರ ಪ್ರೀತಿ, ಹಾರೈಕೆ ಮತ್ತು ಪ್ರಾರ್ಥನೆಗೆ ಧನ್ಯವಾದಗಳು. ತಾಯಿ ಅನುಷ್ಕಾ ಮತ್ತು ಮಗು ಇಬ್ಬರೂ ಆರೋಗ್ಯದಿಂದ ಇದ್ದಾರೆ. ಇಬ್ಬರೂ ಕೂಡ ನಮ್ಮ ಜೀವನದ ಮುಂದಿನ ಘಟ್ಟ ಆರಂಭಿಸಲು ಉತ್ಸುಕರಾಗಿದ್ದೇವೆ. ನಮ್ಮ ಖಾಸಗೀತನವನ್ನು ನೀವು ಗೌರವಿಸುತ್ತೀರ ಎಂಬ ಆಶಾಭಾವನೆಯಿದೆ,” ಎಂದು ವಿರಾಟ್‌ ಕೊಹ್ಲಿ ತಮ್ಮ ಸೋಷಿಯಲ್‌ ಮೀಡಿಯಾ ಗೋಡೆಗಳ ಮೇಲೆ ಬರೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...