ಬೆಂಗಳೂರು: ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ಶಾಕಿಂಗ್ ಘಟನೆ ಬೆಳಕಿಗೆ ಬಂದಿದೆ. ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಮನೆಗೆ ನುಗ್ಗಿ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಬಗ್ಗೆ ಆರೋಪ ಕೇಳಿಬಂದಿದೆ.
ಈ ಘಟನೆ ಅಕ್ಟೋಬರ್ 21ರ ರಾತ್ರಿ ಸಂಭವಿಸಿದ್ದು, ಮಹಿಳೆ ಬಾಡಿಗೆ ಮನೆಯಲ್ಲಿದ್ದ ಸಂದರ್ಭದಲ್ಲಿ ಮೂವರು ಅಪ್ರಾಪ್ತರು ಅಲ್ಲಿ ನುಗ್ಗಿ ಅತ್ಯಾಚಾರ ಎಸಗಿದರೆಂದು ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ನಂತರ ಮಹಿಳೆಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯು ಬೆಳಕಿಗೆ ಬಂದ ಬಳಿಕ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯ ವರದಿಯಂತೆ, ಆರೋಪಿತರು ಅಪರಾಧ ಎಸಗುವ ಮೊದಲು ಮದ್ಯಪಾನ ಮಾಡಿದ ಶಂಕೆ ಇದೆ. ಪೊಲೀಸರು ಆರೋಪಿಗಳನ್ನು ಗುರುತಿಸಿ ಬಂಧಿಸಲು ತೀವ್ರ ಬಲೆ ಬೀಸಿದ್ದಾರೆ.