ಬೆಂಗಳೂರು: ಪಿಜಿ ಮಾಲೀಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿ ಮೇಲೆ ಪಿಜಿ ಮಾಲೀಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯಾಗಿರುವ ಅಶ್ರಫ್ನನ್ನು ಪೊಲೀಸರು ಬಂಧಿಸಿದ್ದಾರೆ.
ಸೋಲದೇವನಹಳ್ಳಿಯಲ್ಲಿರುವ ಖಾಸಗಿ ಪಿಜಿಯೊಂದರಲ್ಲಿ ವಿದ್ಯಾರ್ಥಿನಿ ದಾಖಲಾಗಿ ಕೇವಲ 10 ದಿನವಾಗಿತ್ತು. ಶನಿವಾರ ತಡರಾತ್ರಿ, ಪಿಜಿ ಮಾಲೀಕ ಅಶ್ರಫ್ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಘಟನೆ ಬಳಿಕ ವಿದ್ಯಾರ್ಥಿನಿ ಸೋಲದೇವನಹಳ್ಳಿ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ. ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ಅಶ್ರಫ್ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
.