ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಬಲಿ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಬಲಿಯಾಗಿರುವ ಘಟನೆ ಧಣಿಸಂದ್ರ ಮುಖ್ಯರಸ್ತೆಯಲ್ಲಿ ನಡೆದಿದೆ. ಗೋವಿಂದಪುರ ನಿವಾಸಿಗಳಾದ ನಾಜಿಯಾ ಸುಲ್ತಾನ್, ನಾಜಿಯಾ ಇರ್ಫಾನ್ ಮೃತ ಮಹಿಳೆಯರು ಎಂದು ಗುರುತಿಸಲಾಗಿದೆ.
ಬೈಕ್ ಮೇಲೆ ಹೋಗುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಚಾಲಕ ಲಾರಿ ಹತ್ತಿಸಿದ್ದಾನೆ. ಯಲಹಂಕ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳ ರವಾನೆ ಮಾಡಲಾಗಿದೆ. ಲಾರಿ ಚಾಲಕನನ್ನು ಹೆಣ್ಣೂರು ಸಂಚಾರಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.