ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ
ಬೆಂಗಳೂರು: ನಗರದ ಬೇಗೂರು ಸಮೀಪದ ಡಂಪಿಂಗ್ ಯಾರ್ಡ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಘಟನೆ ಇಂದು ಬೆಳಗಿನ ಜಾವ ನಡೆದಿದೆ.
ಬೆಳಿಗ್ಗೆ ಸುಮಾರು 5 ಗಂಟೆ ವೇಳೆಗೆ ಡಂಪಿಂಗ್ ಯಾರ್ಡ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ಸೇರಿದಂತೆ ವಿವಿಧ ತ್ಯಾಜ್ಯ ವಸ್ತುಗಳನ್ನು ಡಂಪ್ ಮಾಡಿದ್ದ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ದಟ್ಟ ಹೊಗೆ ಆವರಿಸಿಕೊಂಡಿತ್ತು.
ಘಟನೆಯ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ನಾಲ್ಕು ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುವ ಕಾರ್ಯ ಕೈಗೊಂಡರು. ಸತತ ಎರಡು ಗಂಟೆಗಳ ಕಾಲ ಶ್ರಮಪಟ್ಟ ಬಳಿಕ ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತರಲಾಗಿದೆ.
ಅದೃಷ್ಟವಶಾತ್ ಈ ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
ಸದ್ಯ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣವೇನು ಎಂಬುದರ ಬಗ್ಗೆ ಅಗ್ನಿಶಾಮಕ ದಳ ಹಾಗೂ ಸಂಬಂಧಪಟ್ಟ ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ
Date:






