ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ

Date:

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ

ನವದೆಹಲಿ: ಬೆಂಗಳೂರು, ಮಂಡ್ಯ ಮತ್ತು ಮೈಸೂರು ರೈಲು ಮಾರ್ಗಕ್ಕೆ ಸಂಬಂಧಿಸಿದ ವಿವಿಧ ಸಾರ್ವಜನಿಕ ಬೇಡಿಕೆಗಳ ಕುರಿತು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದರು.

ಗುರುವಾರ ಮಧ್ಯಾಹ್ನ ಸಂಸತ್ ಭವನದಲ್ಲಿರುವ ತಮ್ಮ ಕಚೇರಿಗೆ ಆಗಮಿಸಿದ ರೈಲ್ವೆ ಸಚಿವರೊಂದಿಗೆ ಮಾತುಕತೆ ನಡೆಸಿದ ಕುಮಾರಸ್ವಾಮಿ ಅವರು, ಬೆಂಗಳೂರು ನಗರದಿಂದ ಮೈಸೂರು ನಡುವಿನ ರೈಲು ಸಂಪರ್ಕಕ್ಕೆ ಸಂಬಂಧಿಸಿದಂತೆ ಬಹಳ ದಿನಗಳಿಂದ ಬಾಕಿ ಉಳಿದಿರುವ ಸಾರ್ವಜನಿಕರ ಬೇಡಿಕೆಗಳನ್ನು ರೈಲ್ವೆ ಸಚಿವರ ಗಮನಕ್ಕೆ ತಂದರು.

ಈ ವೇಳೆ, ಬೆಂಗಳೂರು–ಮಂಗಳೂರು–ಮುರಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲು ಸಂಖ್ಯೆ 16585ಕ್ಕೆ ಮಂಡ್ಯ ಜಿಲ್ಲೆಯ ಮದ್ದೂರು ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಿಲುಗಡೆ ನೀಡುವ ಕುರಿತು ಚರ್ಚಿಸಲಾಯಿತು. ಈ ಬೇಡಿಕೆಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದಲ್ಲದೆ, ಮದ್ದೂರು ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವ ಕುರಿತು ಸಚಿವ ಕುಮಾರಸ್ವಾಮಿ ಅವರು ಮನವಿ ಸಲ್ಲಿಸಿದರು. ಮದ್ದೂರು ನಿಲ್ದಾಣದಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ನಿಲ್ದಾಣವನ್ನು ಆಧುನೀಕರಿಸಿ ಮೇಲ್ದರ್ಜೆಗೆ ಏರಿಸುವ ಅಗತ್ಯವಿದೆ ಎಂದು ಅವರು ರೈಲ್ವೆ ಸಚಿವರಿಗೆ ವಿವರಿಸಿದರು.ರೈಲ್ವೆ ಸಚಿವರು ಈ ವಿಚಾರಗಳ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

Share post:

Subscribe

spot_imgspot_img

Popular

More like this
Related

LPG ಬಿಕ್ಕಟ್ಟು ತೀವ್ರ: ಗ್ಯಾಸ್ ಕೊರತೆಯಿಂದ ಆಟೋ ಚಾಲಕರ ಪರದಾಟ

LPG ಬಿಕ್ಕಟ್ಟು ತೀವ್ರ: ಗ್ಯಾಸ್ ಕೊರತೆಯಿಂದ ಆಟೋ ಚಾಲಕರ ಪರದಾಟ ಹುಬ್ಬಳ್ಳಿ: ಮಧ್ಯಪ್ರಾಚ್ಯದಲ್ಲಿ...

ಭೀಕರ ಅಪಘಾತ: KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು!

ಭೀಕರ ಅಪಘಾತ: KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು! ದೊಡ್ಡಬಳ್ಳಾಪುರ:...

ಬಾಯಿಯ ದುರ್ವಾಸನೆ ಕಾಡುತ್ತಿದೆಯೇ? ಈ ಸುಲಭ ಸಲಹೆಗಳು ನಿಮಗಾಗಿ!

ಬಾಯಿಯ ದುರ್ವಾಸನೆ ಕಾಡುತ್ತಿದೆಯೇ? ಈ ಸುಲಭ ಸಲಹೆಗಳು ನಿಮಗಾಗಿ! ಪ್ರತಿಯೊಬ್ಬರೂ ಬಾಯಿ ಶುಚಿತ್ವದ...

ಸೈಬರ್ ಅಪರಾಧ ನಿಯಂತ್ರಣಕ್ಕೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಸೈಬರ್ ಅಪರಾಧ ನಿಯಂತ್ರಣಕ್ಕೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ಬೆಂಗಳೂರು: ಸೈಬರ್ ಅಪರಾಧಗಳನ್ನು...