ಬೆಂಗಳೂರು ವಿವಿಯಲ್ಲಿ ಕೆಲಸ ಖಾಲಿ ಇದೆ; ಅರ್ಜಿ ಸಲ್ಲಿಸಿ

0
119

ಬೆಂಗಳೂರು ವಿಶ್ವವಿದ್ಯಾಲಯ 2021-22ನೇ ಸಾಲಿನಲ್ಲಿ ಬ್ಯಾಕ್ ಲಾಗ್ ಬೋಧಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಬುಧವಾರ ನೇಮಕಾತಿ ಆದೇಶ ಪ್ರಕಟವಾಗಲಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮಾತ್ರ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳ ಅಭ್ಯರ್ಥಿಗಳು ಸಹ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ.


ವಿದ್ಯಾರ್ಹತೆ, ಅರ್ಜಿ ನಮೂನೆ ಸೇರಿದಂತೆ ಇತರ ವಿವರಗಳನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಜೂನ್ 23ರಂದು ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 30/7/2021 ಕೊನೆಯ ದಿನವಾಗಿದೆ.
ಪ್ರೊಫೆಸರ್ 5, ಅಸೋಸಿಯೇಟ್ ಪ್ರೊಫೆಸರ್ 6, ಅಸಿಸ್ಟೆಂಟ್ ಪ್ರೊಫೆಸರ್ 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಪ್ರೊಫೆಸರ್ ಮತ್ತುಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ 500 ರೂ.ಗಳು, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ 250 ರೂ. ಶುಲ್ಕವನ್ನು ಪಾವತಿ ಮಾಡಬೇಕು.

ಪ್ರೊಫೆಸರ್ ಹುದ್ದೆಗೆ ಮಾಸಿಕ 1,44,200 ರಿಂದ 2,18,200 ರೂ. ವೇತನ ನಿಗದಿ ಮಾಡಲಾಗಿದೆ. ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ಮಾಸಿಕ 1,31,400 ರಿಂದ 2,17,100 ರೂ. ವೇತನ ನಿಗದಿ ಮಾಡಲಾಗಿದೆ. ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ 57,700 ರಿಂದ 1,82,400 ರೂ. ವೇತನವಿದೆ.
ಹೆಚ್ಚಿನ ಮಾಹಿತಿಗಾಗಿ https://bangaloreuniversity.ac.in/ ವೆಬ್‌ ಸೈಟ್‌ಗೆ ಭೇಟಿ ನೀಡಿ.

LEAVE A REPLY

Please enter your comment!
Please enter your name here