ಲೋಕಸಭೆ ಚುನಾವಣೆಯ ಮುಕ್ಕಾಲು ಭಾಗ ಫಲಿತಾಂಶ ಈಗಾಗಲೇ ಬಹಿರಂಗವಾಗಿದೆ. ರಾಜ್ಯದ ಸುಮಾರು 24 ಕ್ಷೇತ್ರಗಳಲ್ಲಿ ಕಮಲ ಅರಳುತ್ತಿದೆ. ಇನ್ನು ಬೆಂಗಳೂರಿನಲ್ಲೂ ಬಿಜೆಪಿ ಗೆಲುವಿನ ನಗೆ ಬೀರುತ್ತಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪ್ರಕಾಶ್ ರಾಜ್ ಭಾರಿ ಹಿನ್ನಡೆ ಅನುಭವಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಈ ಕ್ಷೇತ್ರದಲ್ಲಿ ತಮ್ಮ ಎದುರಾಳಿ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರನ್ನು ಪರಾಭವಗೊಳಿಸಿದ್ದಾರೆ. ಆದ್ರೆ ಪ್ರಕಾಶ್ ರಾಜ್ ಅತಿ ಕಡಿಮೆ ಮತ ಪಡೆದುಕೊಂಡಿದ್ದಾರೆ.
ಈ ಮೂಲಕ ನಟ ಪ್ರಕಾಶ್ ರಾಜ್ ಸೋಲು ಅನುಭವಿಸಿದ್ದಾರೆ. ಪ್ರಕಾಶ್ ರಾಜ್ ಠೇವಣಿಯನ್ನು ಕಳೆದುಕೊಂಡಿದ್ದಾರೆ.