ಬೆಂಗಳೂರು ಸೇರಿ ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ..!

0
37

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ಇಂದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ ಹಾಗೂ ವಿಜಯನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.

ಸೇಡಂ, ಬೀದರ್, ಬೇಗೂರು, ಮಂಡ್ಯ, ಕೃಷ್ಣರಾಜಸಾಗರ, ರಾಮನಗರ, ನಂಜನಗೂಡು, ಭಾಗಮಂಡಲ, ಮೈಸೂರು, ಮುದಗಲ್, ಗಬ್ಬೂರು, ಗುಂಡ್ಲುಪೇಟೆ, ಕಳಸ, ಸಕಲೇಶಪುರ, ಬಂಡೀಪುರ, ಹೆಸರಘಟ್ಟ, ಬೆಂಗಳೂರಿನ ವಿವಿಧೆಡೆ ಗುರುವಾರ ಮಳೆಯಾಗಿದೆ.

ಕಲಬುರಗಿಯಲ್ಲಿ 41.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಇಂದು ಕೂಡ ಮಳೆ ಮುಂದುವರೆಯಲಿದೆ. ಎಚ್​ಎಎಲ್​ನಲ್ಲಿ 34.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ