No menu items!
30.6 C
Munich
Wednesday, August 12, 2026

ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಸೆ. 11ರಿಂದ ಭಾರಿ ಮಳೆ!

Must read

ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಸೆ. 11ರಿಂದ ಭಾರಿ ಮಳೆ!

ಬೆಂಗಳೂರು:- ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆ. 11ರಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೀದರ್, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಎಚ್​ಎಎಲ್​​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

- Advertisement -spot_img

More articles

- Advertisement -spot_img

Latest article