ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ: ಹವಾಮಾನ ಇಲಾಖೆ

Date:

ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಒಣ ಹವಾಮಾನ ಮುಂದುವರೆಯಲಿದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದ ನಡುವೆ ಲಘು ಮಳೆಯ ಸಾಧ್ಯತೆ ಇದೆ ಎಂದು ಇಲಾಖೆಯ ಪೂರ್ವಾನುಮಾನವು ಸೂಚಿಸಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಕೊಡಗು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಹ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದೇ ವೇಳೆ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರುವುದಾಗಿ, ಲಘು ಮಳೆಯಾಗುವ ಸಾಧ್ಯತೆಗಳಿವೆ. ಗಾಳಿಯ ವೇಗ ಪ್ರತಿ ಗಂಟೆಗೆ 11 ಕಿ.ಮೀ ಇರುವುದು, ಗರಿಷ್ಠ ತಾಪಮಾನ 27°C ಮತ್ತು ಕನಿಷ್ಠ ತಾಪಮಾನ 17°C ಇರುವುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

Share post:

Subscribe

spot_imgspot_img

Popular

More like this
Related

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು ಮಾತನಾಡಲಿ – ಡಿಕೆ ಶಿವಕುಮಾರ್

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು...

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು:...

ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ʼಗೆ ಮತ್ತೆ ಸಿಬಿಐ ಸಮನ್ಸ್

ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ʼಗೆ ಮತ್ತೆ ಸಿಬಿಐ ಸಮನ್ಸ್ ನವದೆಹಲಿ: ಕರೂರಿನಲ್ಲಿ...

ರೋಗಿಗಳನ್ನ ಸಾಗಿಸಬೇಕಿದ್ದ ಆ್ಯಂಬ್ಯುಲೆನ್ಸ್‌ʼನಲ್ಲಿ ಜನರ ಪ್ರಯಾಣ..!

ರೋಗಿಗಳನ್ನ ಸಾಗಿಸಬೇಕಿದ್ದ ಆ್ಯಂಬ್ಯುಲೆನ್ಸ್‌ʼನಲ್ಲಿ ಜನರ ಪ್ರಯಾಣ..!ಗದಗ: ರೋಗಿಗಳ ಸಾಗಾಟಕ್ಕೆ ಬಳಸಬೇಕಿದ್ದ ಆ್ಯಂಬ್ಯುಲೆನ್ಸ್‌ನಲ್ಲಿ...