ಬೆಂಡೆಕಾಯಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಕಾರಿಯೇ? ಇಲ್ಲಿದೆ ಉತ್ತರ

Date:

ಬೆಂಡೆಕಾಯಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಕಾರಿಯೇ? ಇಲ್ಲಿದೆ ಉತ್ತರ

ಸಾಮಾನ್ಯವಾಗಿ ಎಲ್ಲಾ ಬಗೆಯ ತರಕಾರಿಗಳು ನಮ್ಮ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಅದರಲ್ಲೂ ವಿಶೇಷವಾಗಿ ಬೆಂಡೆಕಾಯಿ ಮಧುಮೇಹ ರೋಗಿಗಳಿಗೆ ಔಷಧಿ ಇದ್ದಂತೆ ಎಂದು ಹೇಳಲಾಗುತ್ತದೆ. ಬೆಂಡೆಕಾಯಿಯಲ್ಲಿ ಇರುವ ತುಂಬಾ ಕಡಿಮೆ ಕ್ಯಾಲರಿ (30ಕೆಸಿಎಎಲ್/100ಗ್ರಾಂ) ತೂಕ ಇಳಿಸಲು ಒಂದು ಅತ್ಯುತ್ತಮ ಆಹಾರ. ಇದು ತುಂಬಾ ಕಡಿಮೆ ಕ್ಯಾಲರಿ ನೀಡುವುದು. ಅಷ್ಟೇ ಅಲ್ಲದೇ ಬೆಂಡೆಕಾಯಿಯಲ್ಲಿ ಉನ್ನತ ಮಟ್ಟದ ನಾರಿನಾಂಶವಿದ್ದು, ಇದು ಹೊಟ್ಟೆಯು ದೀರ್ಘಕಾಲ ತುಂಬಿರುವಂತೆ ಮಾಡುವುದು.
ಬೆಂಡೆಕಾಯಿ ಗ್ಲೈಸೆಮಿಕ್ ಸೂಚ್ಯಂಕ ಹಾಗೂ ಕಾರ್ಬೋಹೈಡ್ರೇಟ್ ಅಂಶಗಳು ತುಂಬಾನೇ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇದು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ದಿಢೀರಾಗಿ ಏರಿಕೆ ಮಾಡುವ ಯಾವುದೇ ಗುಣಲಕ್ಷಣಗಳು, ಈ ತರಕಾರಿಯಲ್ಲಿ ಕಂಡುಬರುವುದಿಲ್ಲ. ಇದರಿಂದಾಗಿ ಬೆಂಡೆಕಾಯಿ ಸೇವನೆಯಿಂದ, ಮಧುಮೇಹವನ್ನು ತಕ್ಕಮಟ್ಟಿಗಾದರೂ ಕೂಡ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸಹಾಯವಾಗುತ್ತದೆ.
ಇನ್ನು ಈ ಬಗ್ಗೆ ಆರೋಗ್ಯ ತಜ್ಞರು ಹೇಳುವ, ಪ್ರಕಾರ 100ಗ್ರಾಂ ಬೆಂಡೆಕಾಯಿಯಲ್ಲಿ ಕೇವಲ 7 ಗ್ರಾಂ ನಷ್ಟು ಕಾರ್ಬೋಹೈಡ್ರೇಟ್ ಮಾತ್ರ ಸಿಗಲಿದೆ. ಜೊತೆಗೆ ಗ್ಲೈಸೆಮಿಕ್ ಸೂಚ್ಯಂಕ ಕೂಡ ಇದರಲ್ಲಿ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದರಿಂದ, ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗದಂತೆ ನೋಡಿಕೊಳ್ಳುವುದು ಮಾತ್ರವಲ್ಲದೆ, ಮಧುಮೇಹವನ್ನು ಕೂಡ ನಿಯಂತ್ರಣದಲ್ಲಿಡಲು ಸಹಾಯವಾಗುತ್ತದೆ.
ಬೆಂಡೆಕಾಯಿ ತನ್ನಲ್ಲಿ ಹಲವಾರು ರೀತಿಯ ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಜೊತೆಗೆ ಆಂಟಿ ಆಕ್ಸಿಡೆಂಟ್, ಬೀಟಾ-ಕ್ಯಾರೋಟಿನ್ ಪೋಲಿಕ್ ಆಮ್ಲ ಕೂಡ ಈ ತರಕಾರಿಯಲ್ಲಿ ಯಥೇಚ್ಛವಾಗಿ ಕಂಡು ಬರುತ್ತದೆ.
ಇದರ ಜೊತೆಗೆ ಈ ತರಕಾರಿಯಲ್ಲಿ ಆಂಟಿ ಇನ್ಫಾಮೇಟರಿ ಗುಣಲಕ್ಷಣಗಳು ಕೂಡ ಹೆಚ್ಚಾಗಿರುವ ಕಾರಣ, ಸಕ್ಕರೆಕಾಯಿಲೆ ಇರುವವರಿಗೆ ಇದೊಂದು ಹೇಳಿ ಮಾಡಿಸಿದ ತರಕಾರಿ ಎನ್ನುವುದರಲ್ಲಿ ಎರಡು ಮಾತಿಲ್ಲ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಬೆಂಗಳೂರು: ಸಿದ್ದರಾಮಯ್ಯರ...

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ತಿರುವನಂತಪುರ: ವೈವಿಧ್ಯತೆಯ...

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ ವೈರಲ್

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ...

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್ ದೇವನಹಳ್ಳಿ:...