ಬೆಳಗಾವಿಯಲ್ಲಿ ಅಪ್ರಾಪ್ತೆ ಮೇಲೆ ಆರು ಜನ ಯುವಕರಿಂದ ಅತ್ಯಾಚಾರ!

Date:

ಬೆಳಗಾವಿಯಲ್ಲಿ ಅಪ್ರಾಪ್ತೆ ಮೇಲೆ ಆರು ಜನ ಯುವಕರಿಂದ ಅತ್ಯಾಚಾರ!

ಬೆಳಗಾವಿ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಒಂದು ವರ್ಷ ವಯಸ್ಸಿನ ಪುಟ್ಟ ಮಗುವಿನಿಂದ ಹಿಡಿದು 70-80 ವರ್ಷದ ವೃದ್ಧೆಯೂ ಅತ್ಯಾಚಾರಕ್ಕೆ ಒಳಗಾಗಿರುವ ಘಟನೆಗಳು ನಡೆಯುತ್ತಿವೆ. ಸಮಾಜಕ್ಕೆ ಭಯಪಟ್ಟು ಹೇಳದೇ ಉಳಿದಿರುವ ಕಥೆಗಳು ಮತ್ತೆಷ್ಟೋ.
ನಗರ, ಹಳ್ಳಿ, ವಯಸ್ಸಿನ ವ್ಯತ್ಯಾಸದಲ್ಲಿ ಪ್ರತಿದಿನ ಸಾಕಷ್ಟು ಮಹಿಳೆಯರು ಕಿರುಕುಳುಕ್ಕೆ ಒಳಗಾಗುತ್ತಿದ್ದಾರೆ.ಇದೀಗ ನಗರದ ಹೊರ ವಲಯದ ಕಾಕತಿ ಠಾಣಾ ವ್ಯಾಪ್ತಿಯ ಗುಡ್ಡದಲ್ಲಿ ಹದಿನೈದು ವರ್ಷದ ಬಾಲಕಿ ಮೇಲೆ 6 ಜನರ ಗ್ಯಾಂಗ್ನಿಂದ ಎರಡೆರೆಡು ಬಾರಿ ಸಾಮೂಹಿಕ ಅತ್ಯಾಚಾರವೆಸಗಿರುವಂತಹ ಘಟನೆ ನಡೆದಿದೆ.
ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಎಫ್ಐಆರ್ ದಾಖಲಾದ ಒಂದೇ ದಿನದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಎ1 ಸೇರಿ ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.
ಆರು ತಿಂಗಳ ಹಿಂದೆ ಸ್ನೇಹಿತ ಬಾಲಕಿಯನ್ನು ಪುಸಲಾಯಿಸಿ ಗುಡ್ಡಕ್ಕೆ ಕರೆದೊಯ್ದು 6 ದುರುಳರಿಂದ ಅತ್ಯಾಚಾರವೆಸಗಲಾಗಿದೆ. ಕೃತ್ಯವೆಸಗುವಾಗ ದುಷ್ಕರ್ಮಿಗಳು ವಿಡಿಯೋ ಮಾಡಿಕೊಂಡಿದ್ದಾರೆ. ಬಳಿಕ ಅದೇ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಮತ್ತೊಮ್ಮೆ ಅತ್ಯಾಚಾರ ಮಾಡಿದ್ದಾರೆ. ಈ ವೇಳೆ ಕೂಡ ವಿಡಿಯೋ ಮಾಡಿಕೊಂಡಿದ್ದಾರೆ. ಅದೇ ವಿಡಿಯೋಗಳನ್ನು ಇಟ್ಟುಕೊಂಡು ಇದೀಗ ಮತ್ತೆ ಬಾಲಕಿಗೆ ಬೆದರಿಕೆ ಹಿನ್ನೆಲೆ ಎಪಿಎಂಸಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...