ಬೆಳಗಾವಿಯಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣ ಬಹಳ ಹಿಂದೆ ನಡೆದಿರೋದು: ಸಚಿವ ಜಿ ಪರಮೇಶ್ವರ್!
ಬೆಂಗಳೂರು:- ಬೆಳಗಾವಿಯಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣ ಬಹಳ ಹಿಂದೆ ನಡೆದಿರೋದು ಎಂದು ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 5 ಜನರನ್ನು ಬಂಧನ ಮಾಡಲಾಗಿದೆ. ಅಲ್ಲದೇ ಗ್ಯಾಂಗ್ ರೇಪ್ ಪ್ರಕರಣ ಬಹಳ ಹಿಂದೆ ನಡೆದಿದೆ. ಡಿಸೆಂಬರ್, ಜನವರಿಯಲ್ಲಿ ನಡೆದಿರುವ ಘಟನೆಯ ಬಗ್ಗೆ ಯಾರು ದೂರು ಕೊಟ್ಟಿರಲಿಲ್ಲ ಎಂದು ತಿಳಿಸಿದರು. ಈಗ ದೂರು ನೀಡಿದ್ದು ದೂರು ಆಧರಿಸಿ ಈಗಾಗಲೇ ಐದು ಜನರನ್ನ ಬಂಧನ ಮಾಡಲಾಗಿದೆ. ಬೆಳಗಾವಿ ಕಮಿಷನರ್‌ಗೆ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಇನ್ನೂ ತಾಂತ್ರಿಕ ಸಮಿತಿ ವರದಿ ಆಧರಿಸಿ ಹೇಮಾವತಿ ಕೆನಾಲ್ ನಿರ್ಮಾಣದ ಕೆಲಸ ಪ್ರಾರಂಭ ಮಾಡಿದ್ದೇವೆ. ಈಗ ಬಿಜೆಪಿ ಶಾಸಕರು ಗಲಾಟೆ ಮಾಡಿಸುತ್ತಿದ್ದಾರೆ. ಹೇಮಾವತಿ ಕೆನಾಲ್ ಮಾಡುವುದಕ್ಕೆ ತಾಂತ್ರಿಕ ಸಮಿತಿ ರಚನೆ ಮಾಡಿ ವರದಿ ಕೇಳಿದ್ದೆವು. ಯೋಜನೆ ಮಾಡಿ ಯಾವುದೇ ತೊಂದರೆ ಇಲ್ಲ ಎಂದು ವರದಿ ಹೇಳಿತ್ತು. ವರದಿ ಮುಂದಿಟ್ಟುಕೊಂಡು ಕೆಲಸ ಆರಂಭ ಮಾಡಲಾಗಿದೆ. ಈಗ ಬಿಜೆಪಿ ಶಾಸಕರು ಪ್ರತಿಭಟನೆ ಮಾಡಿಸಿದ್ದಾರೆ ಎಂದು ಆರೋಪಿಸಿದರು. ಈಗ ನಾನು ತುಮಕೂರಿಗೆ ಹೋಗುತ್ತಿದ್ದೇನೆ. ಅಧಿಕಾರಿಗಳ ಸಭೆ ಕರೆದು ಚರ್ಚೆ ಮಾಡುತ್ತೇನೆ. ಯಾವುದೇ ಸಮಸ್ಯೆ ಇಲ್ಲದೇ ಕೆಲಸ ಮುಂದುವರಿಸುತ್ತೇವೆ ಎಂದು ತಿಳಿಸಿದರು.
ಕೆನಾಲ್ ಯೋಜನೆ ವಿರುದ್ಧ ಪ್ರತಿಭಟನೆ ಮಾಡಿದ ಸ್ವಾಮೀಜಿಗಳ ಮೇಲೆ ಎಫ್‌ಐಆರ್ ದಾಖಲು ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದಕ್ಕಾಗಿಯೇ ಈಗ ತುಮಕೂರಿಗೆ ಹೊರಟಿದ್ದೇನೆ. ಅಲ್ಲಿ ಸಭೆ ನಡೆಸಿ ಮುಂದಿನ ತೀರ್ಮಾನ ಮಾಡುತ್ತೇವೆ ಎಂದರು.