ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಇಮೇಲ್!

tnit editors
1 Min Read

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಇಮೇಲ್!

ಬೆಳಗಾವಿ:- ಚೆನ್ನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇಮೇಲ್​ ಬಂದಿದೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು, ಇ-ಮೇಲ್​ ಎಲ್ಲಿಂದ ಬಂದಿದೆ ಎನ್ನುವುದನ್ನು ತನಿಖೆ ನಡೆಸಿದ್ದಾರೆ.

ಚೆನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆಳಗಾವಿ ಏರ್​ಪೋರ್ಟ್​ ಅಥಾರಿಟಿಗೆ ಮೇಲ್ ಬಂದಿದೆ. ಹೀಗಾಗಿ ಬೆಳಗಾವಿಗೆ ಚೆನೈನಿಂದ ವಿಮಾನ ಸಂಪರ್ಕ ಕಡಿತಗೊಳಸಲಾಗಿದೆ. ಇನ್ನು ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇ ಮೇಲ್ ಎಲ್ಲಿಂದ ಬಂದಿದೆ? ಯಾರು ಮಾಡಿದ್ದಾರೆ ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚೆಗೆ ಬಾಂಬ್ ಬೆದರಿಕೆ ಹಾವಳಿ ಹೆಚ್ಚಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಶಾಲೆ, ಹೋಟೆಲ್​ಗಳಿಗೆ ಬಾಂಬ್ ಬೆದರಿಕೆ ಹಾಕಲಾಗುತ್ತಿದೆ. ಇದೀಗ ವಿಮಾನಯಾನ ಸಂಸ್ಥೆಗಳಿಗೂ ಕಾಲಿಟ್ಟಿದೆ.

Share This Article