ಬೆಳಗ್ಗೆ ಪೋಲಿಸ್ ಡ್ಯೂಟಿ, ರಾತ್ರಿ ವೇಳೆ ಕಳ್ಳತನ: ಹೆಡ್ ಕಾನ್ಸ್ಟೇಬಲ್ ಅರೆಸ್ಟ್

Date:

ಬೆಂಗಳೂರು : ಕಳ್ಳನನ್ನು ಹಿಡಿಯುವುದು ಪೊಲೀಸ್ ಅಧಿಕಾರಿ ಕೆಲಸ. ಆದರೆ, ಪೊಲೀಸ್ ಅಧಿಕಾರಿಯೇ ಕಳ್ಳತನ ಮಾಡಿ ಖಾಕಿ ಬಲೆಗೆ ಬಿದ್ದಿದ್ದಾನೆ. ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಹೆಡ್ ಕಾನ್ಸ್ಟೇಬಲ್ ಓರ್ವರನ್ನು ಬೈಯ್ಯಪ್ಪನಹಳ್ಳಿ ಠಾಣೆ ಪೋಲಿಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿದ್ದರಾಮರೆಡ್ಡಿ (37)ಬಂಧಿತ ಆರೋಪಿಯಾಗಿದ್ದು, ಈತ ಚಿಕ್ಕಬಳ್ಳಾಪುರ ರೈಲ್ವೆ ಹೊರ ಠಾಣೆಯ ಹೆಡ್ ಕಾನ್ಸ್ಟೇಬಲ್ ಆಗಿದ್ದ. ಕಳ್ಳತನದಲ್ಲಿ ಈತನಿಗೆ ಸಾಬಣ್ಣ (38) ಸಾಥ್ ನೀಡುತ್ತಿದ್ದನು ಎಂದು ಪೊಲೀಸರು ಹೇಳಿದ್ದಾರೆ. ಬೆಳಗ್ಗೆ ಪೋಲಿಸ್ ಡ್ಯೂಟಿ, ರಾತ್ರಿ ವೇಳೆ ಕಳ್ಳತನವೇ ಕಾಯಕವನ್ನಾಗಿ ಮಾಡಿಕೊಂಡಿದ್ದ ಈತ ಕೇರಳ, ತಮಿಳುನಾಡು ಪ್ರಯಾಣಿಕರನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ. ಇನ್ನು, ಆಗಸ್ಟ್ನಲ್ಲಿ ಬೈಯ್ಯಪ್ಪನಹಳ್ಳಿ ಸ್ಟೇಷನ್ ಬಳಿ ರೈಲಿನಿಂದ ಪ್ರಯಾಣಿಕರ ಬ್ಯಾಗ್ ಕಳುವು ಮಾಡಿ, ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನ ದೋಚಿಕೊಂಡಿದ್ದ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...

ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ!

ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ! ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ...