ಬೆಳ್ಳಂಬೆಳಗ್ಗೆ ಈ ಕೆಲಸ ಮಾಡಿದ್ರೆ ಹಾರ್ಟ್ ಅಟ್ಯಾಕ್ ಜನುಮದಲ್ಲಿ ಆಗಲ್ಲ!
ಇಂದಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗೆ ಗುರಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇನ್ನೂ ಬಾಳಿ ಬದುಕಬೇಕಾದ ಯುವಜನತೆಯರು, ಸಣ್ಣ ವಯಸ್ಸಿನಲ್ಲಿಯೇ ಈ ಕಾಯಿಲೆಗೆ ಬಲಿಯಾಗುತ್ತಿರುವುದು, ನಿಜಕ್ಕೂ ನೋವುಂಟು ಮಾಡುತ್ತಿದೆ.
ಯಾಕೆ ಈ ಕಾಯಿಲೆಯಿಂದಾಗಿ ಹೆಚ್ಚಿನವರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ ಎನ್ನುವುದನ್ನು ನೋಡುವುದಾದರೆ, ಕೆಲವರು ತಮ್ಮ ದೈಹಿಕ ಫಿಟ್ನೆಸ್ ಕಾಯ್ದುಕೊಳ್ಳುವ ಸಲುವಾಗಿ ಜಿಮ್‍ನಲ್ಲಿ ಮಾಡುವ ಅತಿಯಾದ ವರ್ಕೌಟ್‍ನಿಂದಾಗಿ, ಹೃದಯಕ್ಕೆ ಅತಿಯಾದ ಒತ್ತಡ ಬೀಳುವುದರಿಂದ, ಇಂದಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಹೆಚ್ಚಾಗುತ್ತಿವೆ, ಎನ್ನುವ ಕೂಗು ಒಂದು ಕಡೆ ಯಾದರೆ, ಜಡಜೀವನ ಶೈಲಿ, ಅನಾರೋಗ್ಯಕಾರಿ ಆಹಾರಪದ್ಧತಿಯಿಂದಾಗಿಯೂ ಕೂಡ ಸಣ್ಣ ವಯಸ್ಸಿನ ಲ್ಲಿಯೇ ಹೃದಯದ ಸಮಸ್ಯೆಗಳು ಕಾಣಿಸಿ ಕೊಳ್ಳುತ್ತಿದೆ ಎನ್ನುವ ಮಾತು ಇನ್ನೊಂದು ಕಡೆ.
ಇನ್ನೂ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಬೆಳಗಿನ ಸಮಯವನ್ನು ಅತ್ಯಂತ ಮುಖ್ಯವೆಂದು ಪರಿಗಣಿಸಲಾಗಿದೆ. ಈ ಸಮಯದಲ್ಲಿ ಅಳವಡಿಸಿಕೊಳ್ಳುವ ಉತ್ತಮ ಅಭ್ಯಾಸಗಳು ಇಡೀ ದಿನದ ಶಕ್ತಿ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ.
ಹೃದಯವು ಯಾವಾಗಲೂ ಸದೃಢವಾಗಿ ಮತ್ತು ಆರೋಗ್ಯವಾಗಿರಬೇಕಾದರೆ ಉಪಾಹಾರಕ್ಕೆ ಮೊದಲು ಕೆಲವು ಪ್ರಮುಖ ಆರೋಗ್ಯ ದಿನಚರಿಗಳನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ.
ಈ ಅಭ್ಯಾಸಗಳು ರಕ್ತದೊತ್ತಡ, ಕೊಲೆಸ್ಟ್ರಾಲ್ ಮತ್ತು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತವೆ.ಇದು ಹೃದಯಾಘಾತದ ಅಪಾಯವನ್ನು ಬಹಳ ಮಟ್ಟಿಗೆ ಕಡಿಮೆ ಮಾಡುತ್ತದೆ.
ಬೆಳಿಗ್ಗೆ ಎದ್ದ ತಕ್ಷಣ 2 ಗ್ಲಾಸ್ ನೀರು :ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ದೇಹದಿಂದ ವಿಷವನ್ನು ತೆಗೆದುಹಾಕಲು ಮತ್ತು ರಕ್ತ ಪರಿಚಲನೆ ಸುಧಾರಿಸಳು ಸಹಾಯ ಮಾಡುತ್ತದೆ.ರಕ್ತದೊತ್ತಡ ನಿಯಂತ್ರಣದಲ್ಲಿಡುತ್ತದೆ ಮತ್ತು ಹೃದಯ ಸ್ನಾಯುಗಳನ್ನು ಬಲಪಡಿಸುತ್ತದೆ. ಈ ಅಭ್ಯಾಸವು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.
ಸೂರ್ಯನ ಕಿರಣಕ್ಕೆ ಒಡ್ಡಿಕೊಳ್ಳುವುದು : ಬೆಳಿಗ್ಗೆ ಸೂರ್ಯನ ಬೆಳಕಿನಲ್ಲಿ ಸ್ವಲ್ಪ ಸಮಯ ಕಳೆಯುವುದು ಮೂಳೆಗಳಿಗೆ ಮಾತ್ರವಲ್ಲದೆ ನಿಮ್ಮ ಹೃದಯದ ಆರೋಗ್ಯಕ್ಕೂ ಮುಖ್ಯವಾಗಿದೆ. ಸೂರ್ಯನ ಬೆಳಕು ದೇಹದಲ್ಲಿ ವಿಟಮಿನ್ ಡಿ ಮಟ್ಟವನ್ನು ಹೆಚ್ಚಿಸುತ್ತದೆ.ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ವಿಟಮಿನ್ ಡಿ ಕೊರತೆಯು ಹೃದಯ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ.
ದೇಹವನ್ನು ಕ್ರಿಯಾಶೀಲವಾಗಿಡಿ :ಬೆಳಗಿನ ಜಾವ ಲಘು ವ್ಯಾಯಾಮ, ಯೋಗ ಅಥವಾ ನಡಿಗೆ ಮಾಡುವುದರಿಂದ ಹೃದಯವನ್ನು ಆರೋಗ್ಯವಾಗಿಡಬಹುದು. ಇದು ರಕ್ತದ ಹರಿವನ್ನು ಹೆಚ್ಚಿಸುತ್ತದೆ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯದ ಕಾರ್ಯವನ್ನು ಸುಧಾರಿಸುತ್ತದೆ.
ಆರೋಗ್ಯಕರ ಉಪಹಾರ ಸೇವಿಸಿ :ಆರೋಗ್ಯಕರ ಉಪಹಾರವಿಲ್ಲದೆ ನಿಮ್ಮ ದಿನವನ್ನು ಪ್ರಾರಂಭಿಸುವುದು ಅಪೂರ್ಣ. ಧಾನ್ಯಗಳು, ಹಣ್ಣುಗಳು, ಬೀಜಗಳು ಮತ್ತು ಪ್ರೋಟೀನ್‌ಗಳಿಂದ ಸಮೃದ್ಧವಾಗಿರುವ ಉಪಾಹಾರವನ್ನು ಸೇವಿಸುವುದರಿಂದ ಚಯಾಪಚಯ ಕ್ರಿಯೆ ಸುಧಾರಿಸುತ್ತದೆ ಮತ್ತು ಹೃದಯದ ಆರೋಗ್ಯಕ್ಕೆ ಪ್ರಯೋಜನವಾಗುತ್ತದೆ.