ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಲಾರಿ ಪಲ್ಟಿಯಾಗಿ 9 ಮಂದಿ ಸಾವು

tnit editors
1 Min Read

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಲಾರಿ ಪಲ್ಟಿಯಾಗಿ 9 ಮಂದಿ ಸಾವು

ಕಾರವಾರ ಜಿಲ್ಲೆಯ ಯಲ್ಲಾಪುರ ಅರಬೈಲ್ ಬಳಿ ಮಿನಿ ಲಾರಿ ಉರುಳಿ 9 ಜನರ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ತಡರಾತ್ರಿ ಘಟನೆ ನಡೆದಿದ್ದು, ಸುಮಾರು 17 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಹಾವೇರಿ ಜಿಲ್ಲೆಯ ಸವಣೂರಿನವರು ಎನ್ನಲಾಗಿದ್ದು,
ತರಕಾರಿ ತುಂಬಿದ್ದ ಹಾವೇರಿಯಿಂದ ಅಂಕೋಲದ ಕಡೆ ಹೊರಟಿತ್ತು, ಲಾರಿಯಲ್ಲಿ 30 ಮಂದಿ ಕುಳಿತಿದ್ದರು. ವೇಗವಾಗಿ ಬರುತ್ತಿದ್ದ ವೇಳೆ ಲಾರಿ ಪಲ್ಟಿಯಾಗಿ ದುರಂತ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಯಲ್ಲಾಪುರ ಪೊಲೀಸರು 9 ಜನರ ಶವಗಳನ್ನ ಹೊರತೆಗೆದಿದ್ದಾರೆ. ಈ ಸಂಬಂಧ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

Share This Article