ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌; ರಾಜ್ಯಾದ್ಯಂತ ದಾಳಿ, ದಾಖಲೆಗಳ ಪರಿಶೀಲನೆ

tnit editors
1 Min Read

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌; ರಾಜ್ಯಾದ್ಯಂತ ದಾಳಿ, ದಾಖಲೆಗಳ ಪರಿಶೀಲನೆ

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ತುಮಕೂರು, ಮಂಗಳೂರು, ವಿಜಯಪುರ, ಬೆಂಗಳೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ದಾಳಿ ನಡೆದಿದೆ. ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.
ಹೌದು ಬೆಂಗಳೂರಿನಲ್ಲಿ ಅಧಿಕಾರಿಗಳಾದ ಟಿ.ವಿ.ಮುರಳಿ, ಹೆಚ್‌.ಆರ್‌.ನಟರಾಜ್‌ ಮತ್ತು ಗ್ರಾಮಾಂತರದಲ್ಲಿ ಅನಂತ್‌ಕುಮಾರ್‌ಗೆ ಸೇರಿದ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ದಾಖಲೆಗಳನ್ನು ಪರಿಶೀಲನೆ ನಡೆಸಿದೆ.
ತುಮಕೂರು ನಿರ್ಮಿತಿ ಕೇಂದ್ರ ಎಂಡಿ ರಾಜಶೇಖರ ಮನೆ ಮೇಲೆ ರೇಡ್‌ ಆಗಿದೆ. ತುಮಕೂರಿನ ಸಪ್ತಗಿರಿ ಬಡಾವಣೆ, ಎಸ್‌ಎಸ್ ಪುರಂನಲ್ಲಿ ಇರುವ ರಾಜಶೇಖರ ಸಹೋದರನ ಮನೆ ಮೇಲೂ ದಾಳಿ ಆಗಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪ ಕಾರಣಕ್ಕೆ 10 ಮಂದಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.
ಶಹಾಪೂರ ತಹಸೀಲ್ದಾರ್‌ ಉಮಾಕಾಂತ ಹಳ್ಳೆ ಅವರ ಮನೆ ಮೇಲೂ ದಾಳಿ ಆಗಿದೆ. ಕಲಬುರಗಿಯ ಅಕ್ಕಮಹಾದೇವಿ ಬಡಾವಣೆಯಲ್ಲಿ ತಹಸೀಲ್ದಾರ್‌ ಅವರ ಮನೆ ಮತ್ತು ಕಚೇರಿ ಇದೆ. ಮನೆ ಹಾಗೂ ಕಚೇರಿಯಲ್ಲಿ ಲೋಕಾ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.

Share This Article