ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್! ಭ್ರಷ್ಟರ ಬೇಟೆಯಾಡುತ್ತಿರುವ ಲೋಕಾಯುಕ್ತ
ಬೆಂಗಳೂರು: ಇಂದು ಮುಂಜಾನೆ 9 ಕಡೆ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಹೌದು ರಾಜ್ಯದ ಹಲವೆಡೆ ಸರ್ಕಾರಿ ನೌಕರರ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಸ್ಕಾಂ, ಆರೋಗ್ಯ ಇಲಾಖೆ, ಅರಣ್ಯ, ಪಾಲಿಕೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ನಿವಾಸ, ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಗದಗ, ಕಲಬುರಗಿ ರಾಯಚೂರಿನ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ನಿವಾಸಗಳಿಗೆ ಧಾವಿಸಿದ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ಮಂಜುನಾಥ್ ನಗರದಲ್ಲಿ ಇರುವ ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಿಹೆಚ್ಒ ನಿವಾಸ, ಸುನಿಲ್ ಕುಮಾರ್ ನಿವಾಸಕ್ಕೆ ಬೆಳಗ್ಗೆ 6 ಗಂಟೆಗೇ ಲೋಕಾ ಅಧಿಕಾರಿಗಳು ಆಗಮಿಸಿದ್ದರು. ಆದರೆ, 10 ಗಂಟೆ ತನಕ ಬಾಗಿಲು ತೆರೆಯದೇ ಹೈಡ್ರಮಾ ನಡೆಯಿತು. ನಂತರ 10 ಗಂಟೆಯ ಬಳಿಕ ಸುನೀಲ್ ಬಾಗಿಲು ತೆರೆದರು. ಸದ್ಯ ಸುನಿಲ್ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.